Latest

ರಾಜ್ಯ ರಾಜಧಾನಿಯಲ್ಲಿ ಕನ್ನಡಿಗರ ರಣಕಹಳೆ; ರಾಜಭವನಕ್ಕೆ ಮುತ್ತಿಗೆಗೆ ಕರವೇ ಯತ್ನ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದು, ರಾಜಭವನ ಚಲೋ ಬೃಹತ್ ರ್ಯಾಲಿ ನಡೆಸಿದ್ದಾರೆ.

ಕರವೇ ನಾರಾಯಣಗೌಡ ನೇತೃತ್ವದಲ್ಲಿ ಟೌನ್ ಹಾಲ್ ನಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಎಂಇಎಸ್ ಪುಂಡರ ವಿರುದ್ಧ ಕ್ರಮ ಕೈಗೊಳ್ಳಬೇಕು, ರಾಜ್ಯದಲ್ಲಿ ಎಂಇಎಸ್ ನಿಷೇಧ ಮಾಡಬೇಕು ಎಂದು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ನಾರಾಯಣಗೌಡ ದೇಶದ ಗಡಿಯಲ್ಲಿ ಪಾಕಿಸ್ತಾನ ಉಗ್ರರು ದಾಳಿ ನಡೆಸಿ ಭಯೋತ್ಪಾದನೆ ನಡೆಸುತ್ತಿದ್ದರೆ ರಾಜ್ಯದ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮಹಾರಾಷ್ಟ್ರದ ಎಂಇಎಸ್ ಪುಂಡರು ದಾಳಿ ನಡೆಸಿ ಭಯೋತ್ಪಾದನೆ ನಡೆಸುತ್ತಿದ್ದಾರೆ. ರಾಯಣ್ಣ ಪ್ರತಿಮೆ ಧ್ವಂಸ, ಕನ್ನಡ ಬಾವುಟಕ್ಕೆ ಅಪಮಾನ, ಕನ್ನಡಿಗರ ಮೇಲೆ ಹಲ್ಲೆಯಂತಹ ಪ್ರಕರಣ ಹೆಚ್ಚುತ್ತಿದೆ. ಎಂಇಎಸ್ ಪುಂಡರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ರಾಜ್ಯದಲ್ಲಿ ಎಂಇಎಸ್ ಬ್ಯಾನ್ ಮಾಡುವಂತೆ ಒತ್ತಾಯಿಸಿ ರಾಜಭವನ ಚಲೋ ನಡೆಸುತ್ತಿರುವುದಾಗಿ ತಿಳಿಸಿದರು.

ಟೌನ್ ಹಾಲ್ ಮುಂಭಾಗದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಸಾಗಿ ರಾಜಭವನ ಮುತ್ತಿಗೆಗೆ ಹೊರಟಿದ್ದ ಕರವೇ ಕಾರ್ಯಕರ್ತರನ್ನು ಮೈಸೂರು ಬ್ಯಾಂಕ್ ವೃತ್ತದ ಬಳಿ ಪೊಲೀಸರು ತಡೆದಿದ್ದಾರೆ. ಈ ವೇಳೆ ಕರವೇ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದ, ಸಂಘರ್ಷ ನಡೆದಿದ್ದು, ಪರಿಸ್ಥಿತಿ ಕೈಮೀರುತ್ತಿದ್ದಂತೆ ಪೊಲೀಸರು ಕರವೇ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.
ಚಿನ್ನ ಬೆಳ್ಳಿ ಮೇಲೆ ಹೂಡಿಕೆಗೆ ಉತ್ತಮ ಕಾಲ; ಇಂದಿನ ಬಂಗಾರದ ಬೆಲೆ ಎಷ್ಟಿದೆ?

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button