Latest

ನಾಳೆಯಿಂದ ಮಕ್ಕಳಿಗೆ ಕೊರೊನಾ ಲಸಿಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ಮಕ್ಕಳಿಗೆ ಕೊರೊನಾ ಲಸಿಕೆ ಹಾಕಲು ಸಿದ್ಧತೆ ನಡೆಸಲಾಗಿದ್ದು, ಲಸಿಕೆ ಒಪಡೆದ ಮಕ್ಕಳಿಗೆ ಆರೋಗ್ಯ ಸಮಸ್ಯೆ ಕಂಡುಬಂದರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುವ ನಿಟ್ಟಿನಲ್ಲಿಯೂ ಸಿದ್ಧತೆಗಳು ನಡೆದಿದೆ.

ನಾಳೆಯಿಂದ 15-18 ವರ್ಷದ ಮಕ್ಕಳಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಮೊದಲ ದಿನ ಒಂದು ಶಾಲೆಯಲ್ಲಿ 50 ಮಕ್ಕಳಿಗೆ ಮಾತ್ರ ವ್ಯಾಕ್ಸಿನ್ ಹಾಕಲಾಗುತ್ತಿದ್ದು, 30 ನಿಮಿಷಗಳ ಕಾಲ ಆರೋಗ್ಯದ ಮೇಲೆ ನಿಗಾ ವಹಿಸುವ ನಿಟ್ಟಿನಲ್ಲಿ ಕಾಯುವ ಕೋಣೆಗೆ ಆದ್ಯತೆ ನೀಡಲಾಗುತ್ತಿದೆ. ಅಲ್ಲದೇ ಶಾಲಾ ಆವರಣದಲ್ಲಿ ಆಂಬುಲೆನ್ಸ್ ವ್ಯವಸ್ಥೆ ಕೂಡ ಮಾಡಲಾಗುತ್ತಿದೆ.

ಲಸಿಕೆ ಪಡೆದ ಮಕ್ಕಳಿಗೆ ರಜೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಮಕ್ಕಳಲ್ಲಿ ಸುಸ್ತು, ಕೈನೋವು, ಜ್ವರ ಕಾಣಿಸಿಕೊಂಡರೆ ಅಂತಹ ಮಕ್ಕಳು ಶಾಲೆಗೆ ರಜೆ ಹಾಕಿ ವಿಶ್ರಾಂತಿ ಪಡೆದುಕೊಳ್ಳಬಹುದಾಗಿದೆ.
ಪ್ರಸಾದ ಸೇವಿಸಿ 12 ಮಕ್ಕಳು ಸೇರಿ 30ಕ್ಕೂ ಹೆಚ್ಚು ಜನ ಅಸ್ವಸ್ಥ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button