ಪ್ರಗತಿವಾಹಿನಿ ಸುದ್ದಿ, ಶಿರಸಿ
ಕಾರವಾರದ ಜೆಡಿಎಸ್ ಅಭ್ಯರ್ಥಿ ಆನಂದ ಅಸ್ನೋಟಿಕರ್ ಆಪ್ತನ ಮನೆಯ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ.
ಶಖೀಲ್ ಶೇಖ್ ಅವರ ಶಿರಸಿಯ ಮನೆಯ ಮೇಲೆ ಶುಕ್ರವಾರ ದಾಳಿ ನಡೆದಿದ್ದು, ಅವರು ಸೆಕೆಂಡ್ ಹ್ಯಾಂಡ್ ವಾಹನಗಳ ಮಾರಾಟಗಾರರಾಗಿದ್ದಾರೆ.
5 ಜನ ಅಧಿಕಾರಿಗಳ ತಂಡೆ ದಾಳಿ ನಡೆಸಿರುವುದಾಗಿ ಗೊತ್ತಾಗಿದೆ. ಅಧಿಕಾರಿಗಳು ಆಗಮಿಸಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದಲ್ಲದೆ, ಶಖೀಲ್ ನನ್ನು ಗುಪ್ತ ಸ್ಥಳಕ್ಕೆ ಕರೆದೊಯ್ದಿದ್ದರು.
ಆನಂದ ಅಸ್ನೋಟಿಕರ್ ಶಖೀಲ್ ಮನೆಯಲ್ಲಿ ಹಣ ಸಂಗ್ರಹಿಸಿಟ್ಟಿರಬಹುದು ಎನ್ನುವ ಶಂಕೆಯ ಹಿನ್ನೆಲೆಯಲ್ಲಿ ಈ ದಾಲಿ ನಡೆದಿದೆ. ಸ್ಥಳೀಯ ಪೊಲೀಸರು ದಾಳಿ ನೆರವಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ