
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸದ ಜತೆಗೆ ಒಮಿಕ್ರಾನ್ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಇಂದು ಮತ್ತೆ 10 ಜನರಲ್ಲಿ ರೂಪಾಂತರಿ ವೈರಸ್ ದೃಢಪಟ್ಟಿದೆ.
ಈ ಕುರಿತು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಮತ್ತೆ 10 ಜನರಲ್ಲಿ ಒಮಿಕ್ರಾನ್ ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ ಕರ್ನಾಟಕದಲ್ಲಿ 76ಕ್ಕೆ ಏರಿಕೆಯಾಗಿದೆ.
ವಿದೇಶದಿಂದ ಬೆಂಗಳೂರಿಗೆ ಆಗಮಿಸಿದ್ದ 8 ಜನರಲ್ಲಿ ಹಾಗೂ ಧಾರವಾಡದಲ್ಲಿ ಇಬ್ಬರಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದೆ.
ಇನ್ನು ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚುತ್ತಿದ್ದು, ಒಂದೇ ದಿನದಲ್ಲಿ 33,750 ಜನರಲ್ಲಿ ಸೋಂಕು ದೃಢಪಟ್ಟಿದೆ. 123 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.