Latest

ಒಮಿಕ್ರಾನ್: ದೀರ್ಘಾವಧಿ ಕ್ರಮಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ: ಸಿಎಂ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗುರುವಾರದಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಒಮಿಕ್ರಾನ್ ಕುರಿತು ಒಟ್ಟಾರೆ ರಾಜ್ಯದ ಸ್ಥಿತಿಗತಿಗಳ ಬಗ್ಗೆ ಹಾಗೂ ತೆಗೆದುಕೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚೆ ಮಾಡಿ ದೀರ್ಘಾವಧಿ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕೋವಿಡ್ ಮತ್ತು ಒಮಿಕ್ರಾನ್ ವೈರಸ್ ವೇಗವಾಗಿ ದೇಶ ಹಾಗೂ ರಾಜ್ಯಗಳಲ್ಲಿ ಹರಡುತ್ತಿದೆ. ಈ ಬಗ್ಗೆ ತಜ್ಞರೊಂದಿಗೆ ನಾಳೆ ಸಂಜೆ ಸಭೆ ನಡೆಸಿ ಚರ್ಚಿಸಲಾಗುವುದು. ಹಿಂದೆ ಎರಡು ಅಲೆಗಳನ್ನು ನಿಭಾಯಿಸಿರುವ ಅನುಭವದ ಹಿನ್ನೆಲೆಯಲ್ಲಿ ಆದಷ್ಟೂ ಜನಜೀವನಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಕರೊನಾ ನಿಯಂತ್ರಣಕ್ಕೆ ಏನೆಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂಬ ಬಗ್ಗೆ ಸೂಚನೆ ನೀಡುವಂತೆ ತಜ್ಞರಿಗೆ ಸೂಚನೆ ನೀಡಲಾಗಿದೆ ಎಂದರು.

Home add -Advt

ಲಸಿಕೆ ಅಭಿಯಾನ:
ಇಂದು 15- 18 ವಯೋಮಾನದವರಿಗೆ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು, ಯುವ ಜನರನ್ನು ಸುರಕ್ಷಾ ಚಕ್ರದೊಳಗೆ ತರಬೇಕಿದೆ. ಅದಕ್ಕಾಗಿ ವ್ಯಾಪಕವಾದ ಅಭಿಯಾನವನ್ನು ಕೈಗೊಳ್ಳಲಿದ್ದೇವೆ. ಇದು ಯಶಸ್ವಿಯಾಗಲು , ಪೋಷಕರು, ಶಿಕ್ಷಕರು, ಆರೋಗ್ಯ ಕಾರ್ಯಕರ್ತರ ಸಮನ್ವಯ ಅಗತ್ಯವಿದೆ ಎಂದರು.

ಜನತೆ ಸ್ವಯಂ ನಿಯಂತ್ರಣ ಹಾಕಿಕೊಂಡು, ಮಾಸ್ಕ್ ಧಾರಣೆ, ಅಂತರ ಕಾಯ್ದುಕೊಳ್ಳುವ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ವಿನಂತಿ ಮಾಡಿದರು.

ಪಾದಯಾತ್ರೆ:

ಒಮಿಕ್ರಾನ್ ಭೀತಿಯ ನಡುವೆಯೂ ಕಾಂಗ್ರೆಸ್ ಪಾದಯಾತ್ರೆ ಕೈಗೊಳ್ಳುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಮುಖ್ಯ ಮಂತ್ರಿಗಳು, ಕಾಂಗ್ರೆಸ್ ನಡೆಯನ್ನು ಗಮಸಿಸುತ್ತಿದ್ದು, ಸಾರ್ವತ್ರಿಕ ನಡವಳಿಕೆಯ ಬಗ್ಗೆ ಚರ್ಚೆ ನಡೆಸಿ ತೀರ್ಮಾನಕ್ಕೆ ಬರಲಾಗುವುದು ಎಂದರು.
ಜಿಲ್ಲೆ ಮಾಡಿ ಅಭಿವೃದ್ಧಿ ಮಾಡಿದ್ದು ನಾನು; ವೇದಿಕೆ ಮೇಲೆ ಕಿತ್ತಾಡಿಕೊಳ್ಳುತ್ತಿರುವುದು ಇವರು; ಕುಮಾರಸ್ವಾಮಿ ಆಕ್ರೋಶ

Related Articles

Back to top button