ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸಧೃಡ ಭಾರತ ನಿರ್ಮಾಣದಲ್ಲಿ ಯುವಕರ ಪಾತ್ರ ಅತ್ಯಂತ ಮುಖ್ಯವಾಗಿದ್ದು, ಕೊರೊನಾ ಮಹಾಮಾರಿಯನ್ನು ಎದುರಿಸಲು ವ್ಯಾಕ್ಸಿನ್ (ಚುಚ್ಚುಮದ್ದು) ಪ್ರಬಲ ಅಸ್ತ್ರವಾಗಿದೆ. ಬಂದೆರಗಬಹುದಾದ 3ನೇ ಅಲೆ ಎದುರಿಸಲು ನಾವೆಲ್ಲರೂ ತಯಾರಾಗಬೇಕಾಗಿದೆ. 15 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ವ್ಯಾಕ್ಸಿನ್ ನೀಡಲಾಗುತ್ತಿದ್ದು, ಎಲ್ಲ ತರುಣ ತರುಣಿಯರು ವ್ಯಾಕ್ಸಿನ್ ಹಾಕಿಸಿಕೊಂಡು ಕೋವಿಡ್ ನಿಂದ ಮುಕ್ತಗೊಳ್ಳಬೇಕೆಂದು ಸಂಸದರಾದ ಮಂಗಲಾ ಸುರೇಶ ಅಂಗಡಿ ಅವರಿಂದಿಲ್ಲಿ ಹೇಳಿದರು.
ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ದಿ. 3 ಜನೇವರಿ 2022ರಂದು 15 ವರ್ಷ ಮೇಲ್ಪಟ್ಟ ಯುವಕ/ಯುವತಿಯರಿಗೆ ವ್ಯಾಕ್ಸಿನ್ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೊವಿಡ್ ಈಗ ಮೂರನೇ ಅಲೆಯ ರೂಪದಲ್ಲಿ ಬಂದೆರಗಿದೆ. ಅದರಿಂದ ರಕ್ಷಣೆ ಪಡೆಯಲು ವ್ಯಾಕ್ಸಿನ ಪಡೆದುಕೊಳ್ಳಬೇಕೆಂದು ಕೋರಿದರು. ಭಾರತದಲ್ಲಿ ತಯಾರಿಸಿದ ಲಸಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಪ್ರತಿಯೊಬ್ಬರಿಗೂ ಲಸಿಕೆಯನ್ನು ಕಲ್ಪಿಸುವ ಉದ್ದೇಶ ಹೊಂದಿದ್ದಾರೆ. ಅದರಂತೆ ಉತ್ಪಾದನೆಯೂ ಇದೆ ಎಂದು ತಿಳಿಸಿದರು.
ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಎಂ ವಿ ಜಾಲಿ ಅವರು ಮಾತನಾಡಿ, ಕೊರೊನಾ ವೈರಸ್ ಕೋವಿಡ್ -19 ಸಾಂಕ್ರಾಮಿಕ ರೋಗದ ತುರ್ತು ಸಂದರ್ಭದಲ್ಲಿ ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಈ ಭಾಗದ ಜನರಿಗೆ ಸಕಲ ಸೇವೆ ನೀಡಲು ಬದ್ದವಾಗಿದ್ದು, ಗರ್ಭಿಣಿ ಮತ್ತು ಮಕ್ಕಳ ಆರೈಕೆಗಾಗಿ ಸಕಲ ವ್ಯವಸ್ಥೆಯನ್ನು ಮಾಡಲಾಗಿದೆ. ವ್ಯಾಕ್ಸಿನ ಚುಚ್ಚಿಸಿಕೊಂಡರೆ ಕೊವಿಡ್‌ನಿಂದ ಪಾರಾಗಬಹುದು. ಆದ್ದರಿಂದ ಎಲ್ಲರೂ ಅದರಲ್ಲಿಯೂ ಮುಖ್ಯವಾಗಿ ಯುವ ಸಮುದಾಯ ವ್ಯಾಕ್ಸಿನ್ ಪಡೆಯುವಲ್ಲಿ ಮುಂದೆ ಬರಬೇಕೆಂದು ಕೋರಿದ ಅವರು, ಸಂಭವನೀಯ ಮೂರನೇಯ ಅಲೆಯ ಸಂದರ್ಭದಲ್ಲಿ ಕೋವಿಡ್ -19 ಸೊಂಕಿಗೆ ಸಾಕಷ್ಟು ಮಕ್ಕಳು ಬಳಲಲಿದ್ದಾರೆ ಎಂದು ಅಂದಾಜಿಸಲಾಗಿದ್ದು, ಮಕ್ಕಳ ಚಿಕಿತ್ಸೆಯಲ್ಲಿ ಯಾವುದೇ ತೊಂದರೆಯುಂಟಾಗಬಾರದೆಂದು ಕಾರ್ಯಪ್ರವೃತ್ತರಾಗಿರುವ ಮಕ್ಕಳ ತಜ್ಞವೈದ್ಯರು ಚಿಕಿತ್ಸೆ ನೀಡಲು ಸಿದ್ದರಾಗಿ ನಿಂತಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜೆಎನ್ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚರ‍್ಯರಾದ ಡಾ. ಎನ್ ಎಸ್ ಮಹಾಂತಶೆಟ್ಟಿ, ಚಾರಿಟೇಬಲ್ ಆಸ್ಪತ್ರೆಯ ವೈದ್ಯಕೀಯ ಅಧಿಕ್ಷಕರಾದ ಡಾ. ಆರಿಫ್ ಮಾಲ್ದಾರ, ಡಾ. ರಾಜಶೇಖರ ಸೋಮನಟ್ಟಿ, ಸುಧಾ ರೆಡ್ಡಿ, ಡಾ. ತನ್ಮಯಾ ಮೆಟಗುಡ್ ಸೇರಿದಂತೆ ಮುಂತಾದವರು ಉಪಸ್ಥಿರಿದ್ದರು.
ಅಖಿಲ ಭಾರತ ವೀರಶೈವ ಮಹಾಸಭೆ ಬೆಳಗಾವಿ ಜಿಲ್ಲಾ ಘಟಕ ಅಮವಾಸ್ಯೆ ಅನುಭಾವ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ