Kannada NewsLatest

ಬೆಳಗಾವಿಯಲ್ಲಿ ಕಿಡಿಗೇಡಿಗಳ ಅಟ್ಟಹಾಸ; ಮನೆ ಮುಂದೆ ನಿಲ್ಲಿಸಿದ ಕಾರಿನ ಗಾಜು ಪುಡಿಗೈದ ದುಷ್ಕರ್ಮಿಗಳು

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯಲ್ಲಿ ಮತ್ತೆ ಕಿಡಿಗೇಡಿಗಳ ಅಟ್ಟಹಾಸ ಆರಂಭವಾಗಿದೆ. ಅಪಾರ್ಟ್ ಮೆಂಟ್ ಎದುರು ನಿಲ್ಲಿಸಿದ್ದ ಕಾರಿನ ಮೇಲೆ ಕಲ್ಲೆಸೆದ ಮುಸುಕುಧಾರಿಗಳ ಗುಂಪು ಕಾರಿನ ಗಾಜುಗಳನ್ನು ಪುಡಿ ಪುಡಿ ಮಾಡಿ ಪರಾರಿಯಾಗಿದ್ದಾರೆ.

ಎಸ್ ಪಿ ಎಂ ರಸ್ತೆಯಲ್ಲಿ ಇಂದು ಬೆಳಗಿನ ಜಾವ 4:30ರ ಸುಮಾರಿಗೆ ಈ ಘಟನೆ ನಡೆದಿದೆ. ಉದ್ಯಮಿ ನಿತಿನ್ ಮಹಾಡಗೂತ್ ಗೆ ಸೇರಿದ ಕಾರಿನ ಗಾಜು ಒಡೆದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಕಾರಿನ ಮೇಲೆ ಕಲ್ಲು ಎಸೆಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಖಡೇಬಜಾರ್ ಠಾಣೆಯಲ್ಲಿ ದೂರು ನೀಡಲಾಗಿದೆ. ಆರೋಪಿಗಳ ಪತ್ತೆಗಾಗಿ ಶೋಧ ಆರಂಭವಾಗಿದೆ.
ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಕೊರೊನಾ ಸೋಂಕು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button