ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಯಲಿದ್ದು, ಕಠಿಣ ನಿಯಮ ಜಾರಿ ಬಗ್ಗೆ ಚರ್ಚೆ ನಡೆಯಲಿದೆ.
ಈ ಕುರಿತು ಕಲಬುರ್ಗಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಇಂದು ಸಂಜೆ ಕೋವಿಡ್ ಕುರಿತಾಗಿ ಸಭೆ ನಡೆಯಲಿದೆ. ಟಾಸ್ಕ್ ಫೋರ್ಸ್ ಕಮಿಟಿ ಸದಸ್ಯರು ಸಭೆಯಲ್ಲಿರಲಿದ್ದಾರೆ. ಕೊರೊನಾ ಹೆಚ್ಚಳ ಹಿನ್ನೆಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ, ಕೇಂದ್ರ ಸರ್ಕಾರ ಹಲವು ಮಾರ್ಗದರ್ಶನಗಳನ್ನು ನೀಡಿದೆ. ಈ ನಿಟ್ಟಿನಲ್ಲಿ ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ ಎಂದರು.
ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚಿದೆ. ಪಕ್ಕದ ರಾಜ್ಯದಲ್ಲಿ ಸೋಂಕು ಹೆಚ್ಚಾದಾಗ ನಮ್ಮ ರಾಜ್ಯದಲ್ಲಿ ಕೂಡ ಹೆಚ್ಚಾಗುತ್ತದೆ. ಹಾಗಾಗಿ ಗಡಿಗಳಲ್ಲಿ ಬಿಗಿ ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಇನ್ನಷ್ಟು ಕಠಿಣ ನಿಯಮ ಜಾರಿ ಮಾಡಬೇಕಿದೆ. ಕಳೆದ ಒಂದು ವಾರದಿಂದ ಕೊರೊನಾ ಹಾಗೂ ಒಮಿಕ್ರಾನ್ ಸೋಂಕು ಹೆಚ್ಚುತ್ತಿದೆ. ಮುಂಬರುವ ದಿನಗಳಲ್ಲಿ ಸುದೀರ್ಘ ಕ್ರಮ ಕೈಗೊಳ್ಳಬೇಕಿದೆ ಎಂದು ತಿಳಿಸಿದರು.
ಬೆಳಗಾವಿಯಲ್ಲಿ ಕಿಡಿಗೇಡಿಗಳ ಅಟ್ಟಹಾಸ; ಮನೆ ಮುಂದೆ ನಿಲ್ಲಿಸಿದ ಕಾರಿನ ಗಾಜು ಪುಡಿಗೈದ ದುಷ್ಕರ್ಮಿಗಳು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ