Latest

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದೆ. ರಾಜಧಾನಿ ಬೆಂಗಳೂರಿಗೆ ಹೊಸ ನಿಯಮಗಳು ಜಾರಿಯಾಗಿವೆ.

ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಸಚಿವ ಡಾ.ಆರ್.ಅಶೋಕ್, ರಾಜ್ಯಾದ್ಯಂತ ಎರಡು ವಾರಗಳ ಕಾಲ ವೀಕೆಂಡ್ ಕರ್ಫ್ಯೂ ಇರಲಿದೆ. ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಕರ್ಫ್ಯೂ ಜಾರಿಯಲ್ಲಿರಲಿದೆ. ಈ ವೇಳೆ ಹೋಟೆಲ್ ಗಳಲ್ಲಿ ಪಾರ್ಸೆಲ್, ಅಗತ್ಯ ಸೇವೆಗಳು ಮಾತ್ರ ಇರಲಿವೆ ಎಂದು ಹೇಳಿದರು.

ಬೆಂಗಳೂರಿನಲ್ಲಿ 10, 12ನೇ ತರಗತಿ ಹೊರತುಪಡಿಸಿ ಉಳಿದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಉಳಿದೆಡೆಗಳಲ್ಲಿ ಶಾಲಾ-ಕಾಲೇಜು ಈಗಿರುವಂತೆಯೇ ಮುಂದುವರೆಯಲಿದೆ.

ರಾಜ್ಯದಲ್ಲಿ ಸರ್ಕಾರಿ ಕಚೇರಿಗಳು, ಮಾಲ್ ಗಳು, ಚಿತ್ರಮಂದಿರ, ಪಬ್, ಬಾರ್ ಪಬ್ ಗಳ ಒಟ್ಟು ಶೇ.50ರಷ್ಟು ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.

ಸಮಗ್ರ ವಿವರಕ್ಕೆಇಲ್ಲಿ ಕ್ಲಿಕ್ ಮಾಡಿ :

COVUD Order 4-1

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button