Latest

ಬಿಜೆಪಿ ಕಾರ್ಯಕರ್ತರಿಗೆ ಮುಖ್ಯಮಂತ್ರಿ ಬೊಮ್ಮಾಯಿ ಮಹತ್ವದ ಸೂಚನೆ

 ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಸಾರ್ವಜನಿಕರ ಹಿತದೃಷ್ಟಿಯಿಂದ ಕೋವಿಡ್ ನಿರ್ವಹಣೆಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬಿಜೆಪಿ ಕಚೇರಿಯಲ್ಲಿ ಪಕ್ಷದ ಪಕ್ಷದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೋವಿಡ್ ರೂಪಾಂತರ ತಳಿ ಒಮಿಕ್ರಾನ್ ನ್ನು ಯಾವ ರೀತಿ ನಿರ್ವಹಣೆ ಮಾಡಬೇಕು ಹಾಗೂ ಅದರಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ನಾವು ಸಕ್ರಿಯವಾಗಿ ಭಾಗವಹಿಸಿ ಮಾಹಿತಿ ನೀಡುವುದು, ಕ್ವಾರಂಟೈನ್ ನಲ್ಲಿ ಮಾರ್ಗದರ್ಶನ, ಆಂಬ್ಯುಲೆನ್ಸ್ ನಿರ್ವಹಣೆ, ಲಸಿಕೆ ಅಭಿಯಾನ ಮುಂತಾದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕೆಂಬ ಕರೆಯನ್ನು ಕಾರ್ಯಕರ್ತರಿಗೆ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಮಾಧ್ಯಮಗಳು ಒಟ್ಟಾಗಿ ಮುನ್ನಡೆಯಬೇಕು – ಎಂ.ಕೆ.ಹೆಗಡೆ​

Home add -Advt

Related Articles

Back to top button