Latest

ಬಸವೇಶ್ವರ ಕಾಲೇಜಿನಲ್ಲಿ ಕೊರೊನಾ ಸ್ಫೋಟ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಶಾಲಾ-ಕಾಲೇಜುಗಳಲ್ಲಿ ಮತ್ತೆ ಮಹಾಮಾರಿ ಅಟ್ಟಹಾಸ ಹೆಚ್ಚುತ್ತಿದೆ. ಬಸವೇಶ್ವರ ಕಾಲೇಜಿನಲ್ಲಿ ಕೊರೊನಾ ಸ್ಫೋಟಗೊಂಡಿದ್ದು, ಕಾಲೇಜಿಗೆ ರಜೆ ಘೋಷಿಸಲಾಗಿದೆ.

ಬೆಂಗಳೂರಿನ ಬಸವೇಶ್ವರ ಕಾಲೇಜಿನಲ್ಲಿ 14 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ ಮಂಗಳವಾರ ಕಾಲೇಜು ವಿದ್ಯಾರ್ಥಿಗಳಿಗೆ ರ್ಯಾಂಡಮ್ ಟೆಸ್ಟ್ ಮಾಡಲಾಗಿತ್ತು. ಈ ವೇಳೆ ಮೂವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಬಳಿಕ 11 ವಿದ್ಯಾರ್ಥಿಗಳಿಗೆ ಸೋಂಕು ಹರಡಿದೆ. ಇದೀಗ ಕಾಲೇಜಿನ 400 ವಿದ್ಯಾರ್ಥಿಗಳಲ್ಲಿ 14 ವಿದ್ಯಾರ್ಥಿಗಳಲ್ಲಿ ಕೋವಿಡ್ ಪಾಸಿಟಿವ್ ಬಂದಿದ್ದು ಆತಂಕಕ್ಕೆ ಕಾರಣವಾಗಿದೆ.

ಕಾಲೇಜಿನಲ್ಲಿ ಕೋವಿಡ್ ಸ್ಫೋಟಗೊಂಡಿರುವ ಹಿನ್ನೆಲೆಯಲ್ಲಿ 2 ದಿನಗಳ ಕಾಲ ಕಾಲೇಜಿಗೆ ರಜೆ ಘೋಷಿಸಲಾಗಿದೆ.
ಪೊಲೀಸ್ ಠಾಣೆಗೂ ಒಕ್ಕರಿಸಿದ ಕೊರೊನಾ; ಒಂದೇ ಠಾಣೆಯ 14 ಸಿಬ್ಬಂದಿಗೆ ಸೋಂಕು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button