ಪ್ರಗತಿವಾಹಿನಿ ಸುದ್ದಿ; ಧಾರವಾಡ: ಶ್ರೀ ಕೃಷ್ಣ ಪಾರಿಜಾತ ನಾಟವನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಪರಿಚಯಿಸಿದ ಹಿರಿಯ ಜಾನಪದ ಕಲಾವಿದ, ಗಾಯಕ ಬಸವಲಿಂಗಯ್ಯ ಹಿರೇಮಠ ವಿಧಿವಶರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು.
ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಬಸವಲಿಂಗಯ್ಯ ಅವರನ್ನು ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.
ಮೂತ: ಬೆಳಗಾವಿ ಜಿಲ್ಲೆಯ ಬೇಲೂರಿನವರಾದ ಬಸವಲಿಂಗಯ್ಯ ನೀನಾಸಂ ನಲ್ಲಿ ಶಿಕ್ಷಣ ಪಡೆದು, ಸುಗಮ ಸಂಗೀತ ಕ್ಷೇತ್ರದಲ್ಲಿ ಗಾಯಕರಾಗಿ ಹೆಸರು ಮಾಡಿದ್ದರು. ದೊಡ್ಡಾಟ, ಸಣ್ಣಾಟ, ಪಾರಿಜಾತ ನಾಟಕಗಳನ್ನು ಆಧುನಿಕ ರಂಗಭೂಮಿಗೆ ಪರಿಚಯಿಸಿ ಅವುಗಳನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡಯ್ದು ಅವುಗಳನ್ನು ಹೊಸ ಪೀಳಿಗೆಗೆ ಪರಿಚಯಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ.
ಕುಲಗೋಡ ತಮ್ಮಣ್ಣ ವಿರಚಿತ 12 ಗಂಟೆಗಳ ಅವಧಿಯ ಶ್ರೀ ಕೃಷ್ಣ ಪಾರಿಜಾತವನ್ನು ಮೂರು ಗಂಟೆಯಲ್ಲಿ ಪ್ರೇಕ್ಷಕರ ಮನ ಮುಟ್ಟುವಂತೆ ಮಾಡಿ ಸಾವಿರಕ್ಕೂ ಅಧಿಕ ಪ್ರಯೋಗದಿಂದ ಜನ ಮಾನಸದಲ್ಲಿ ಛಾಪು ಮೂಡಿಸಿದ್ದರು.
ಮೇಕೆದಾಟು ಕಾಂಗ್ರೆಸ್ ಪಾದಯಾತ್ರೆ; ನಗಾರಿ ಬಾರಿಸಿ ಚಾಲನೆ ನೀಡಿದ ಮಲ್ಲಿಕಾರ್ಜುನ ಖರ್ಗೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ