ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇದೀಗ ಸಂಸತ್ ಭವನಕ್ಕೂ ಲಗ್ಗೆಯಿಟ್ಟಿದೆ. ಸಂಸತ್ ಭವನದ 400ಕ್ಕೂ ಹೆಚ್ಚು ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಜನವರಿ 4ರಿಂದ 8ರವರೆಗೆ ಸಂಸತ್ತಿನ 1,409 ಸಿಬ್ಬಂದಿಗಳಿಗೆ ಕೋವಿಡ್ ಟೆಸ್ಟ್ ಮಾಡಲಾಗಿತ್ತು. ಅವರಲ್ಲಿ 402 ಸಿಬ್ಬಂದಿಗಳಿಗೆ ಸೋಂಕು ದೃಢಪಟ್ಟಿದೆ. ರೂಪಾಂತರಿ ವೈರಸ್ ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಸೋಂಕಿತರ ಸ್ಯಾಂಪಲ್ ನ್ನು ಜೀನೋಮ್ ಸೀಕ್ವೆನ್ಸಿಗೆ ಕಳುಹಿಸಲಾಗಿದೆ.
ಬಜೆಟ್ ಅಧಿವೇಶನದ ಸಿದ್ಧತೆಯಲ್ಲಿರುವಾಗಲೇ ಲೋಕಸಭೆ ಹಾಗೂ ರಾಜ್ಯಸಭೆಯ ಹಲವು ಅಧಿಕಾರಿಗಳು ಹಾಗೂ ಸಂಸತ್ ಭವನದ ಸಿಬ್ಬಂದಿಗಳು ಸೋಂಕಿಗೊಳಗಾಗಿದ್ದು, ಅವರ ಸಂಪರ್ಕಕ್ಕೆ ಬಂದವರಲ್ಲಿಯೂ ಇದೀಗ ಕೋವಿಡ್ ಭೀತಿ ಶುರುವಾಗಿದೆ.
ಮೇಕೆದಾಟು ಯೋಜನೆ; ಸಚಿವರೊಂದಿಗೆ ಸಿಎಂ ತುರ್ತು ಸಭೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ