ಪ್ರಗತಿವಾಹಿನಿ ಸುದ್ದಿ: ಹಾವೇರಿ: ಬ್ಯಾಂಕ್ ಲೋನ್ ಗಾಗಿ ಯತ್ನಿಸಿದ್ದ ವ್ಯಕ್ತಿಯೊಬ್ಬ ತನಗೆ ಲೋನ್ ಸಿಗಲಿಲ್ಲ ಎಂಬ ಕಾರಣಕ್ಕೆ ಬ್ಯಾಂಕ್ ಶಾಖೆಗೆ ಬೆಂಕಿಯಿಟ್ಟ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಹೆಡಿಗ್ಗೊಂಡ ಗ್ರಾಮದ ಕೆನರಾ ಬ್ಯಾಂಕ್ ನಲ್ಲಿ ನಡೆದಿದೆ.
33 ವರ್ಷದ ವಸೀಮ್ ಮುಲ್ಲಾ ಬ್ಯಾಂಕ್ ಶಾಖೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಆರೋಪಿ. ಮ್ಯಾನೇಜರ್ ತನಗೆ ಲೋನ್ ನೀಡಲು ನಿರಾಕರಿಸಿದರು ಎಂಬ ಕಾರಣಕ್ಕೆ ಕೋಪಗೊಂಡಿದ್ದ ವಸೀಮ್, ಇಂದು ಬೆಳಗಿನ ಜಾವ ಬ್ಯಾಂಕ್ ಗಾಜನ್ನು ಒಡೆದು ಒಳನುಗ್ಗಿ ಪೆಟ್ರೋಲ್ ಸುರಿದು ಬೆಂಕಿ ಯಿಟ್ಟಿದ್ದಾನೆ. ಬೆಂಕಿಯ ಕೆನ್ನಾಲಿಗೆ ವ್ಯಾಪಿಸುತ್ತಿದ್ದಂತೆ ಬ್ಯಾಂಕ್ ಕಟ್ಟಡದಿಂದ ಕೆಳಗೆ ಜಿಗಿದು ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಗ್ರಾಮಸ್ಥರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಬ್ಯಾಂಕ್ ನ ಬಹುತೇಕ ಭಾಗ ಹಾಗೂ ಕಾಗದ ಪತ್ರಗಳು ಬೆಂಕಿಗಾಹುತಿಯಾಗಿವೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಕಾಗಿನೆಲೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಚಿವರ ಪುತ್ರನಿಗೆ ಬ್ಲ್ಯಾಕ್ ಮೇಲ್; ಇಬ್ಬರು ಆರೋಪಿಗಳ ಬಂಧನ; ಶಾಸಕರ ಪುತ್ರಿ ಕೈವಾಡ ಶಂಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ