ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಹೆಚ್.ಎಂ.ರೇವಣ್ಣ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಮೇಕೆದಾಟು ಯೋಜನೆಗಾಗಿ ಆಗ್ರಹಿಸಿ ಕಾಂಗ್ರೆಸ್ ನಾಯಕರು ಪಾದಯಾತ್ರೆ ಆರಂಭಿಸುತ್ತಿದ್ದು, ಇಂದು ಮೂರನೇ ದಿನಕ್ಕೆ ಕಾಲಟ್ಟಿದೆ. ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಮಾಜಿ ಸಚಿವ ಹೆಚ್.ಎಂ.ರೇವಣ್ಣ ಅವರಿಗೆ ಇದೀಗ ಕೊರೊನಾ ಸೋಂಕು ತಗುಲಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಹಿರಿಯ ನಾಯಕನಿಗೆ ಕೋವಿಡ್ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಇದೀಗ ಪಾದಯಾತ್ರೆಯಲ್ಲಿ ಭಾಗವಹಿಸಿದ ಇನ್ನಿತರ ಕಾಂಗ್ರೆಸ್ ನಾಯಕರಿಗೆ ಹಾಗೂ ಬೆಂಬಲಿಗರಿಗೂ ಕೊರೊನಾ ಆತಂಕ ಶುರುವಾಗಿದೆ.
ಈ ನಡುವೆ ಕಾಂಗ್ರೆಸ್ ನಾಯಕರು ಪಾದಯಾತ್ರೆ ನೆಪದಲ್ಲಿ ಸುಳ್ಲಿನ ಜಾತ್ರೆ ನಡೆಸುತ್ತಾ ಕೊರೊನಾ ಹಂಚುತ್ತಿದ್ದಾರೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.
ಕರುನಾಡಿಗೆ ಶುರುವಾಯ್ತು ಮತ್ತೆ ಲಾಕ್ ಡೌನ್ ಭೀತಿ; ಸಿಎಂ ಸಭೆಗೂ ಮುನ್ನ ತುರ್ತು ಸಭೆ ಕರೆದ ಆರೋಗ್ಯ ಸಚಿವ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ