
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕರೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಸಿಎಂ ಆರೋಗ್ಯ ವಿಚಾರಿಸಿದ್ದಾರೆ.
ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿದ ಪ್ರಧಾನಿ ಮೋದಿ, ಸಿಎಂ ಆರೋಗ್ಯ ವಿಚಾರಿಸಿ, ಸೂಕ್ತ ಚಿಕಿತ್ಸೆ ಪಡೆದುಕೊಳ್ಳುವಂತೆ ಸಲಹೆ ನೀಡಿದರು.
ಈ ವೇಳೆ ಸಿಎಂ ಬೊಮ್ಮಾಯಿ, ತಮಗೆ ಹಾಗೂ ತಮ್ಮ ಕುಟುಂಬದ ಇಬ್ಬರು ಸದಸ್ಯರಿಗೂ ಕೊರೊನಾ ಸೋಂಕು ತಗುಲಿದೆ ಎಂದು ಹೇಳಿದ್ದಾರೆ. ಈ ವೇಳೆ ಎಲ್ಲರೂ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಿ ಎಂದು ಪ್ರಧಾನಿ ಮೋದಿ ಸಲಹೆ ನೀಡಿದ್ದಾರೆ.
ಇದೇ ವೇಳೆ ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆಯೂ ಪ್ರಧಾನಿ ಮೋದಿ ವಿಚಾರಿಸಿದ್ದಾರೆ. ಇದೀಗ ವರ್ಚುವಲ್ ಆಗಿ ಸಭೆ ನಡೆಸುತ್ತಿದ್ದು, ಜನವರಿ 13ರಂದು ಸಂಜೆ ತಾವು ಕರೆದಿರುವ ಸಭೆಗೆ ಪೂರ್ವಭಾವಿಯಾಗಿ ಈ ಸಭೆ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಲಸಿಕಾ ಅಭಿಯಾನವನ್ನು ಹೆಚ್ಚಿಸಲಾಗಿದ್ದು, ತಜ್ಞರು ನೀಡುವ ಸಲಹೆಗಳನ್ನು ಆಧರಿಸಿ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಿಎಂ ವಿವರಿಸಿದ್ದಾರೆ ಎಂದು ತಿಳಿದುಬಂದಿದೆ.
CM ಆಸ್ಪತ್ರೆಗೆ ದಾಖಲು, ಅಲ್ಲಿಂದಲೇ ಮಹತ್ವದ ಸಭೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ