ಪಾದಯಾತ್ರೆಗೆ ಹೊರಟರೆ ಎಲ್ಲಾ ವಾಹನ, ವ್ಯಕ್ತಿಗಳನ್ನು ತಡೆಯಿರಿ – ರಾಜ್ಯ ಸರಕಾರದ ಆದೇಶ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ನಮ್ಮ ನೀರು ನಮ್ಮ ಹಕ್ಕು ಹೆಸರಿನಲ್ಲಿ ಮೇಕೆದಾಟುವಿನಿಂದ ರಾಮನಗರವರೆಗೆ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಭಾಗವಹಿಸಲು ರಾಜ್ಯದ ಯಾವುದೇ ಭಾಗದಿಂದ ಹೊರಡುವುದು ಕಂಡುಬಂದಲ್ಲಿ ಅಂತಹ ವಾಹನ ಮತ್ತು ವ್ಯಕ್ತಿಗಳನ್ನು ತಡೆಯುವಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ರಾಜ್ಯ ಸರಕಾರದ ಮುಖ್ಯಕಾರ್ಯದರ್ಶಿ ರವಿಕುಮಾರ ಈ ಕುರಿತು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಆದೇಶ ನೀಡಿದ್ದು, ಸಾರಿಗೆ ಅಧಿಕಾರಿಗಳು ಸಹಕಾರ ನೀಡಬೇಕೆಂದು ಸೂಚಿಸಿದ್ದಾರೆ.

ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆ ತಡೆಯಲು ರಾಜ್ಯ ಸರಕಾರ ಕ್ರಮ ಕೈಗೊಳ್ಳದಿರುವ ಕುರಿತು ಹೈಕೋರ್ಟ್ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಸರಕಾರ ಈ ಆದೇಶ ಹೊರಡಿಸಿದೆ. ಪಾದಯಾತ್ರೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ ಎಂದು ತಿಳಿಸಲಾಗಿದೆ.

ಆದೇಶದ ಪ್ರತಿಗಾಗಿ ಇಲ್ಲಿ ಕ್ಲಿಕ್ ಮಾಡಿ –  Protest vehicle order

 

ಕಾಂಗ್ರೆಸ್ ಪಾದಯಾತ್ರೆ ನಿಲ್ಲಿಸಲು ಸರಕಾರ ಆದೇಶ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button