ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಖಾಸಗಿ ಕಾಲೇಜಿನ 18 ವಿದಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಜಿಲ್ಲೆಯ ನಿಪ್ಪಾಣಿಯ ಖಾಸಗಿ ಪಿಯು ಕಾಲೇಜಿನ 18 ವಿದ್ಯಾರ್ಥಿಗಳಲ್ಲಿ ಸೋಂಕು ಹರಡಿದ್ದು, ಮುಂಜಾಗೃತಾ ಕ್ರಮವಾಗಿ ಮೂರು ದಿನಗಳ ಕಾಲ ಕಾಲೇಜಿಗೆ ರಜೆ ಘೋಷಿಸಲಾಗಿದೆ ಎಂದು ನಿಪ್ಪಾಣಿ ತಹಶೀಲ್ದಾರ್ ಬಿ.ಮೋಹನ್ ತಿಳಿಸಿದ್ದಾರೆ.
ಬೀದರ್ ಜಿಲ್ಲೆಯ ಹುಮ್ನಾಬಾದ್ ನ ವಾಂಜರಿ ಬಡಾವಣೆ, ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಐವರು ಮಕ್ಕಳಿಗೆ ಕೊರೊನಾ ಸೋಂಕು ತಗುಲಿದ್ದು, ವಿದ್ಯಾರ್ಥಿಗಳನ್ನು ಹಾಸ್ಟೇಲ್ ನಲ್ಲಿಯೇ ಕ್ವಾರಂಟೈನ್ ಮಾಡಲಾಗಿದೆ. ವಸತಿ ಶಾಲೆಯ 230 ವಿದ್ಯಾರ್ಥಿಗಳ ಪೈಕಿ 5 ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ.
ಇನ್ನು ರಾಯಚೂರು ಜಿಲ್ಲೆಯ ಜಾಲಹಳ್ಳಿ ಶಾಲೆಯ ಐವರು ಮಕ್ಕಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ 1-7 ವರ್ಷದ ಪುಟ್ಟ ಮಕ್ಕಳಿಗೂ ಸೋಂಕು ಕಂಡುಬರುತ್ತಿದ್ದು, ಆತಂಕ ಎದುರಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ