Kannada NewsKarnataka NewsLatest

ಬೆಳಗಾವಿಯಲ್ಲಿ ಒಂದೇ ದಿನ 276 ಜನರಿಗೆ ಸೋಂಕು; ಓರ್ವ ಸಾವು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಗುರುವಾರ ಒಂದೇ ದಿನ 276 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಓರ್ವ ವ್ಯಕ್ತಿ ಸಾವಿಗೀಡಾಗಿದ್ದಾರೆ.

ಬೆಳಗಾವಿ ತಾಲೂಕಿನಲ್ಲಿ 213, ಚಿಕ್ಕೋಡಿಯಲ್ಲಿ 23, ಗೋಕಾಕಲ್ಲಿ 11, ಬೈಲಹೊಂಗಲದಲ್ಲಿ 10, ಅಥಣಿಯಲ್ಲಿ 4, ರಾಮದುರ್ಗ, ರಾಯಬಾಗ ಹಾಗೂ ಹುಕ್ಕೇರಿಯಲ್ಲಿ ತಲಾ 3, ಖಾನಾಪುರದಲ್ಲಿ ಒಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಗೋಕಾಕಲ್ಲಿ 58 ವರ್ಷದ ವ್ಯಕ್ತಿ ಸಾವಿಗೀಡಾಗಿದ್ದಾರೆ. ನಿನ್ನೆ ಬೆಳಗಾವಿ ಜಿಲ್ಲೆಯಲ್ಲಿ 269 ಜನರಿಗೆ ಸೋಂಕು ಪತ್ತೆಯಾಗಿತ್ತು.

ಬೆಳಗಾವಿ ಖಾಸಗಿ ಕಾಲೇಜಿನ 18 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು

 

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button