Latest

ಚಿಕ್ಕೋಡಿಯಲ್ಲಿ ಜನ ಸಂಪರ್ಕ ಸಭೆ ನಡೆಸಿದ ಸಂಸದ ಅಣ್ಣಾಸಾಹೇಬ ಜೊಲ್ಲೆ

ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಜನಸಂಪರ್ಕ ಸಭೆ ಮೂಲಕ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಜನರ ಸಮಸ್ಯೆ ಆಲಿಸಲಾಗಿದೆ. ಹಂತ ಹಂತವಾಗಿ ಜನರ ಸಮಸ್ಯೆ ಬಗೆಹರಿಸಲಾಗುತ್ತದೆ ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.

ಚಿಕ್ಕೋಡಿ ನಗರದ ಲೋಕಸಭೆ ಸದಸ್ಯರ ಕಚೇರಿಯ ಸಭಾಗೃದಹಲ್ಲಿ ಹಮ್ಮಿಕೊಂಡ ಜನಸಂಪರ್ಕ ಸಭೆಯಲ್ಲಿ ಅಹವಾಲುಗಳನ್ನು ಸ್ವೀಕರಿಸಿ ಅವರು ಮಾತನಾಡಿದರು. ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಜನರೊಂದಿಗೆ ಬಹಳ ದಿನಗಳಿಂದ ಭೇಟ್ಟಿಯಾಗಿ ಅವರ ಸಮಸ್ಯೆಗಳನ್ನು ತಿಳಿಯಲು ಸಂಸದ ಅಧಿವೇಶನ್ ಕೊರೊನಾ ಹಿನ್ನಲೆಯಲ್ಲಿ ಆಗಿರಲಿಲ್ಲ. ಆದ್ದರಿಂದ ಇಂದು ಕ್ಷೇತ್ರದ ಜನತೆಯೊಂದಿಗೆ ಸಭೆ ನಡೆಸಿ ಅವರ ಸಮಸ್ಯೆಗಳನ್ನು ತಿಳಿದುಕೊಂಡಿದ್ದು ಅವುಗಳನ್ನು ಆಧ್ಯತೆಯ ಮೇರೆಗೆ ಬಗೆಹರಿಸಲಾಗುವುದು ಎಂದರು.

ಬರುವ ದಿನಗಳಲ್ಲಿ ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಕ್ರೀಯಾ ಯೋಜನೆಗಳನ್ನು ರೂಪಿಸಲಾಗುತ್ತಿದ್ದು.ಅವುಗಳನ್ನು ಬರುವ ಸಂಸತ್ ಬಜೆಟನಲ್ಲಿ ಅಳವಡಿಸುವಂತೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಖ್ಯಾತ ನ್ಯಾಯವಾದಿ ಅಶೋಕ ಹರಗಾಪೂರೆ, ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ದುಂಡಪ್ಪ ಬೆಂಡವಾಡೆ,ನ್ಯಾಯವಾದಿ ಎಸ್.ಬಿ.ಕುಂಡ್ರುಕ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಇದ್ದರು.
ಬಜೆಟ್ ಅಧಿವೇಶನಕ್ಕೆ ಡೇಟ್ ಫಿಕ್ಸ್

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button