ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಮತ್ತೆ ಕಿಡಿಗೇಡಿಗಳು ಪುಂಡಾಟ ಮೆರೆದಿದ್ದು, ಕನ್ನಡ ನಾಮಫಲಕಗಳಿಗೆ ಮಸಿ ಬಳಿದಿದ್ದಾರೆ.
ಬೆಳಗಾವಿ ತಾಲೂಕಿನ ಕಂಗ್ರಾಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರಸ್ತೆ ಸುರಕ್ಷತೆ ಜಾಗೃತಿ ಮೂಡಿಸುವ ನಾಮಫಲಕಕ್ಕೆ ಮಸಿ ಬಳಿಯಲಾಗಿದೆ. ಕಿಡಿಗೇಡಿಗಳ ಈ ಕೃತ್ಯಕ್ಕೆ ಕನ್ನಡಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪ, ವಾಹನಗಳಿಗೆ ಬೆಂಕಿ, ಕನ್ನಡ ನಾಮಫಲಕಗಳಿಗೆ ಮಸಿ ಬಳಿದು ಪುಂಡಾಟ ಮೆರೆದಿದ್ದ ಎಂಇಎಸ್ ಪುಂಡರನ್ನು ಬಂಧಿಸಿ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದರೂ ಕೂಡ ಕಿಡಿಗೇಡಿಗಳ ಕೃತ್ಯ ಮಾತ್ರ ಜಿಲ್ಲೆಯಲ್ಲಿ ನಿಂತಿಲ್ಲ.
ಒಮಿಕ್ರಾನ್ ನಡುವೆ ಕೊರೊನಾ ಸ್ಫೋಟ; ಒಂದೇ ದಿನದಲ್ಲಿ 2.71 ಲಕ್ಷಕ್ಕೂ ಹೆಚ್ಚು ಜನರಲ್ಲಿ ಸೋಂಕು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ