ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಕೊರೊನಾ ಸೋಂಕಿನಿಂದ ಚೇತರಿಸಿಕೊಳ್ಳುತ್ತಿದ್ದು, ಇಂದು ಸಿಎಂ ಅವರ ಸ್ವ್ಯಾಬ್ ನ್ನು ಮಣಿಪಾಲ್ ಆಸ್ಪತ್ರೆ ಸಿಬ್ಬಂದಿ ಸಂಗ್ರಹಿಸಿದ್ದಾರೆ.
ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ಬಂದು 7 ದಿನವಾಗಿದ್ದು, ಈಗಾಗಲೇ ಚೇತರಿಸಿಕೊಳ್ಳುತ್ತಿದ್ದಾರೆ. ನಾಳೆ ಸಿಎಂ ಅವರ ಕ್ವಾರಂಟೈನ್ ಅವಧಿ ಮುಗಿಯಲಿದ್ದು, ವರ್ಕ್ ಫ್ರಂ ಹೋಂ ಅವಧಿಯೂ ಮುಗಿಯುತ್ತಿರುವುದರಿಂದ ಮರಳಿ ಭೌತಿಕ ಕರ್ತವ್ಯಕ್ಕೆ ಹಾಜರಾಗಲು ಸಿದ್ಧತೆ ನಡೆಸಿದ್ದಾರೆ.
ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಕೋವಿಡ್ ಟೆಸ್ಟ್ ಮಾಡುವ ನಿಟ್ಟಿನಲ್ಲಿ ಸಿಎಂ ಅವರ ಆರ್.ಟಿ.ನಗರದ ನಿವಾಸಕ್ಕೆ ಆಗಮಿಸಿದ ಮಣಿಪಾಲ್ ಆಸ್ಪತ್ರೆ ಸಿಬ್ಬಂದಿಗಳು ಸಿಎಂ ಬೊಮ್ಮಾಯಿ ಅವರ ಸ್ವ್ಯಾಬ್ ಸಂಗ್ರಹಿಸಿ ಲ್ಯಾಬ್ ಗೆ ಕಳುಹಿಸಿದ್ದಾರೆ. ಸಂಜೆ ವೇಳೆಗೆ ವರದಿ ಬರುವ ಸಾಧ್ಯತೆ ಇದೆ.
ಮೂವರು ಪುಟ್ಟ ಮಕ್ಕಳ ನಿಗೂಢ ಸಾವು; ಜಿಲ್ಲೆಯಲ್ಲಿ ಹೆಚ್ಚಿದ ಆತಂಕ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ