ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೊರೊನಾ ಲಸಿಕೆ ಕಡ್ಡಾಯವಲ್ಲ, ವ್ಯಕ್ತಿಗೆ ಬಲವಂತದಿಂದ ಒಪ್ಪಿಸಿ ವ್ಯಾಕ್ಸಿನ್ ಹಾಕುವಂತಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದೆ.
ವಿಕಲಾಂಗರಿಗೆ ಮನೆ ಮನೆಗೆ ಹೋಗಿ ಆದ್ಯತೆಯ ಕೋವಿಡ್ ಲಸಿಕೆ ನೀಡಬೇಕೆಂಬ ಎನ್ ಜಿ ಒ ಎವಾರಾ ಫೌಂಡೇಶನ್ ಮಾಡಿದ ಮನವಿಗೆ ಪ್ರತಿಕ್ರಿಯೆಯಾಗಿ ಕೇಂದ್ರ ಆರೋಗ್ಯ ಇಲಾಖೆ ಅಫಿಡವಿಟ್ ಸಲ್ಲಿಸಿದ್ದು, ಲಸಿಕೆ ಪ್ರಮಾಣಪತ್ರಗಳನ್ನು ಪಡೆಯಲು ವಿಕಲಾಂಗ ವ್ಯಕ್ತಿಗಳಿಗೆ ವಿನಾಯಿತಿ ನೀಡುವ ವಿಷಯದ ಕುರಿತು ಯಾವುದೇ ಉದ್ದೇಶಕ್ಕಾಗಿ ಲಸಿಕೆ ಪ್ರಮಾಣಪತ್ರವನ್ನು ಕೊಂಡೊಯ್ಯುವುದನ್ನು ಕಡ್ಡಾಯಗೊಳಿಸುವ ಯಾವುದೇ ಎಸ್ ಒ ಪಿ ನೀಡಿಲ್ಲ ಎಂದು ತಿಳಿಸಿದೆ.
ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿ ನಿರ್ದೇಶನಗಳು ಸಂಬಂಧಪಟ್ಟ ವ್ಯಕ್ತಿಯ ಒಪ್ಪಿಗೆಯನ್ನು ಪಡೆಯದೆ ಯಾವುದೇ ಬಲವಂತದ ಲಸಿಕೆಯನ್ನು ಕಲ್ಪಿಸುವುದಿಲ್ಲ. ಕೋವಿಡ್ ಸಾಂಕ್ರಾಮಿಕ ರೋಗವಾಗಿರುವುದರಿಂದ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ವ್ಯಾಕ್ಸಿನೇಷನ್ ಸಾರ್ವಜನಿಕರ ಹಿತಾಸಕ್ತಿಯಾಗಿದೆ ಎಂದು ವಿವರಿಸಿದೆ.
ಅರಣ್ಯ ಸಚಿವರನ್ನು ವಜಾಗೊಳಿಸಿ, ಪಕ್ಷದಿಂದಲೇ ಉಚ್ಛಾಟನೆ ಮಾಡಿದ ಸಿಎಂ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ