Kannada NewsLatest

ಚುಚ್ಚು ಮದ್ದು ಪಡೆದ ಮೂರು ಮಕ್ಕಳು ಸಾವು; ಪ್ರಕರಣ ಸಂಪೂರ್ಣ ತನಿಖೆಗೆ ಸತೀಶ್ ಜಾರಕಿಹೊಳಿ ಒತ್ತಾಯ

ಪ್ರಗತಿವಾಹಿನಿ ಸುದ್ದಿ; ಗೋಕಾಕ : ಚುಚ್ಚು ಮದ್ದು ಪಡೆದ ಮೂರು ಕಂದಮ್ಮಗಳ ಸಾವು ಪ್ರಕರಣದ ಕುರಿತು ಸಂಪೂರ್ಣವಾಗಿ ತನಿಖೆ ಆಗಬೇಕು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಒತ್ತಾಯ ಮಾಡಿದ್ದಾರೆ.

ಇಲ್ಲಿನ ಹಿಲ್‌ ಗಾರ್ಡನ್‌ ಕಚೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿ, ಮುಚ್ಚು ಮದ್ದು ಪಡೆದ ಮಕ್ಕಳ ಸಾವಿಗೆ ಕೆಳವರ್ಗದ ಸಿಬ್ಬಂದಿಗಳ ನಿರ್ಲಕ್ಷ್ಯವೇ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಈ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು. ಮುಂದೆ ಈ ರೀತಿಯ ಘಟನೆಗಳು ಜಿಲ್ಲೆಯಲ್ಲಿ ಮರುಕಳಿಸದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಮೊದಲನೇ ಅಲೆಗೂ ಮೂರನೇ ಅಲೆಗೆ ಹೊಲಿಕೆ ಮಾಡಿದಾಗ ಸಾವು, ನೋವು ಕಡಿಮೆಯಾಗುತ್ತಿವೆ. ಅದು ಸಂತೋಷದ ವಿಷಯವಾಗಿದೆ. ಕೊರೊನಾ ನಿಯಂತ್ರಣಕ್ಕೆ ಸರ್ಕಾರ, ಜಿಲ್ಲಾಡಳಿತದಿಂದ ಮಾತ್ರ ಮಾಡಲು ಸಾಧ್ಯವಿಲ್ಲ. ಜನರಿಗೂ ಅವರದೇಯಾದ ಜವಾಬ್ದಾರಿ ಇದೆ. ಎಲ್ಲರೂ ಸೇರಿಕೊಂಡಾಗ ಮಾತ್ರ ನಿಯಂತ್ರಣ ಮಾಡಲು ಸಾಧ್ಯ ಎಂದು ಹೇಳಿದ್ದಾರೆ.

ಇನ್ನೂ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಕುರಿತು ಪ್ರತಿಕ್ರಿಯಿಸಿ, ದೇಶದಲ್ಲಿ ಉತ್ತರಪ್ರದೇಶ, ಪಂಜಾಬ್, ಉತ್ತರಖಂಡ, ಗೋವಾ, ಮಣಿಪುರ ಒಟ್ಟು ಐದು ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದೆ. ನಾವು ಕೂಡ ಹತ್ತಿರದ ಗೋವಾ ರಾಜ್ಯಕ್ಕೆ ಚುನಾವಣೆಗೆ ಹೋಗುತ್ತಿದ್ದೇವೆ. ಚುನಾವಣೆ ಉಸ್ತುವಾರಿಗಳು, ಮುಖಂಡರೊಂದಿಗೆ ಚುನಾವಣೆಯ ತಯಾರಿಗಳ ಬಗ್ಗೆ ಚರ್ಚಿಸಲಾಗುತ್ತದೆ ಎಂದರು.

ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ : ಬದಲಾದ ಶಿಕ್ಷಣ ವ್ಯವಸ್ಥೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಅಗತ್ಯವಿದೆ. ಆದರಿಂದ ಬಡವಿದ್ಯಾರ್ಥಿಗಳು, ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಉಚಿತ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿ ನಡೆಸಲಾಗುತ್ತಿದೆ ಎಂದರು.

ಬಡವಿದ್ಯಾರ್ಥಿಗಳಿಗೆ ಪೊಲೀಸ್‌ ಹಾಗೂ ಸೈನಿಕ ಪರೀಕ್ಷೆಗೆ ತರಬೇತಿ ನೀಡಬೇಕು ಎಂಬುವುದು ನನ್ನ ಹಲವು ದಿನಗಳ ಕನಸಾಗಿತ್ತು. ಆದ್ದರಿಂದ ಪ್ರಯೋಗಿಕವಾಗಿ 10 ದಿನಗಳ ಉಚಿತ ತರಬೇತಿ ನೀಡಲಾಗುತ್ತಿದ್ದು, ಯಶಸ್ವಿಯಾದರೆ ಮುಂದೆ ನಿರಂತರ ತರಬೇತಿ ಕೊಡುವ ಯೋಜನೆಯೂ ಸಹ ಇದೆ ಎಂದು ತಿಳಿಸಿದರು.
ಬೆಳಗಾವಿಯಲ್ಲಿ ಮೂವರು ಮಕ್ಕಳು ಸಾವು ಪ್ರಕರಣ; ಇಬ್ಬರು ಅಧಿಕಾರಿಗಳು ಸಸ್ಪೆಂಡ್

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button