Latest

ಸಿಎಂ ಬಸವರಾಜ್ ಬೊಮ್ಮಾಯಿಗೆ ಕೊರೊನಾ ನೆಗೆಟಿವ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕೊರೊನಾ ಸೋಂಕಿನಿದ ಚೇತರಿಸಿಕೊಂಡಿದ್ದು, ಕೋವಿಡ್ ಟೆಸ್ಟ್ ನಲ್ಲಿ ನೆಗೆಟಿವ್ ಬಂದಿದೆ.

ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಕೊರೊನಾ ಪಾಸಿಟಿವ್ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಬಳಿಕ ಕಳೆದ 7 ದಿನಗಳಿಂದ ಬೆಂಗಳೂರಿನ ಆರ್.ಟಿ ನಗರ ನಿವಾಸದಲ್ಲಿ ಹೋಂ ಐಸೋಲೇಷನ್ ಆಗಿದ್ದರು. ಇದೀಗ ಸಿಎಂ ಬೊಮ್ಮಾಯಿ ಅವರಿಗೆ 2ನೇ ಬಾರಿ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನೆಗೆಟಿವ್ ಬಂದಿದೆ ಎಂದು ಮಣಿಪಾಲ್ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.

Home add -Advt

ಕೋವಿಡ್ ನೆಗೆಟಿವ್ ಬೆನ್ನಲ್ಲೇ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಕೊರೊನಾ ನಿಯಂತ್ರಣ ಕುರಿತು ಮಹತ್ವದ ಸಭೆ ಆರಂಭವಾಗಿದೆ.

ರಾಜ್ಯದಲ್ಲಿ ಒಮಿಕ್ರಾನ್ ಸ್ಫೋಟ

Related Articles

Back to top button