ಮರಕ್ಕೆ ಕಾರು ಡಿಕ್ಕಿ : ಸ್ಥಳದಲ್ಲೇ ಮಹಿಳೆ ಸಾವು

ಪ್ರಗತಿ ವಾಹಿನಿ ಸುದ್ದಿ ಬೆಳಗಾವಿ: ಕಾರು ಮರಕ್ಕೆ ಡಿಕ್ಕಿಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಖಾನಾಪುರ ತಾಲೂಕಿನ ಕಣಕುಂಬಿಯಲ್ಲಿ ನಡೆದಿದೆ.

ಗುಲಾಬಿ ಪಾಂಡುರಂಗ ಗವಸ್ ಮೃತಪಟ್ಟ ಮಹಿಳೆ. ಕಣಕುಂಬಿ ಪ್ರವಾಸಿ ಮಂದಿರದ ಬಳಿಯ ರಸ್ತೆಯಲ್ಲಿ ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರ್ ಚಾಲಕ ಮಹಾದೇವ ಗವಸ್ ಹಾಗೂ ಇನ್ನೋರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಖಾನಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

6 ವರ್ಷದ ಮಗುವಿನೊಂದಿಗೆ ತಾಯಿ ನಾಪತ್ತೆ

Related Articles

Back to top button