ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಅವರು ಹೋಮ್ ಐಸೋಲೇಶನ್ ಗೆ ಒಳಗಾಗಿದ್ದಾರೆ.
ಸ್ವಲ್ಪ ನೆಗಡಿಯ ಲಕ್ಷಣ ಕಾಣಿಸಿದ್ದರಿಂದ ಜಿಲ್ಲಾಧಿಕಾರಿಗಳು ಟೆಸ್ಟ್ ಮಾಡಿಸಿಕೊಂಡಿದ್ದಾರೆ. ಆಗ ಪಾಸಿಟಿವ್ ಲಕ್ಷಣ ಕಾಣಿಸಿದೆ. ಮತ್ತೊಮ್ಮೆ ಟೆಸ್ಟ್ ಮಾಡಿಸಿದಾಗಲೂ ಕೊರೋನಾ ದೃಢಪಟ್ಟಿದೆ.
ಈ ಹಿನ್ನೆಲೆಯಲ್ಲಿ ಅವರು 7 ದಿನಗಳ ಕಾಲ ಮನೆಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ಆಸ್ಪತ್ರೆಗೆ ದಾಖಲಾಗುವಂತ ಯಾವುದೇ ಸಮಸ್ಯೆ ಅವರಿಗೆ ಆಗಿಲ್ಲ.
ಜಿಲ್ಲಾ ಪಂಚಾಯಿತಿ ಸಿಇಒ ದರ್ಶನ್ ಅವರಿಗೂ ಕೆಲವು ದಿನಗಳ ಹಿಂದೆ ಕೊರೋನಾ ಪಾಸಿಟಿವ್ ಆಗಿತ್ತು, ಈಗ ಅವರು ಗಣಿಮುಖರಾಗಿ ಕರ್ತವ್ಯಕ್ಕೆ ಮರಳಿದ್ದಾರೆ.
ವಾರಾಂತ್ಯದ ಕರ್ಫ್ಯೂ: ಮಹತ್ವದ ನಿರ್ಧಾರ: ಸಿಎಂ ಬೊಮ್ಮಾಯಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ