Latest

ಕೋಹ್ಲಿಗೆ ಶೋಕಾಸ್ ನೋಟಿಸ್ ನೀಡಲು ಮುಂದಾಗಿದ್ದ ಗಂಗೂಲಿ: ಟೀಂ ಇಂಡಿಯಾಗೆ ಶಾಕ್

ಪ್ರಗತಿವಾಹಿನಿ ಸುದ್ದಿ; ಮುಂಬೈ: ಟೀಂ ಇಂಡಿಯಾದ ದಕ್ಷಿಣ ಆಫ್ರಿಕಾ ಪ್ರವಾಸಕ್ಕೂ ಮೊದಲು ನಡೆದ ಸುದ್ದಿಗೋಷ್ಠಿಯಲ್ಲಿ ತಂಡದ ನಾಯಕರಾಗಿದ್ದ ವಿರಾಟ್ ಕೋಹ್ಲಿ ಸ್ಪೋಟಕ ಹೇಳಿಕೆಗಳನ್ನು ನೀಡಿದ್ದ ಕಾರಣ ಅವರಿಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಶೋಕಾಸ್ ನೋಟಿಸ್ ನೀಡಲು ಮುಂದಾಗಿದ್ದ ವಿಷಯ ತಡವಾಗಿ ಬೆಳಕಿಗೆ ಬಂದಿದೆ.

ಸುದ್ದಿಗೋಷ್ಠಿಗೂ ಪೂರ್ವದಲ್ಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಕೋಹ್ಲಿ ಉದ್ದೇಶಿಸಿ, ಟೀಂ ಇಂಡಿಯಾದ ನಾಯಕತ್ವದಿಂದ ಕೆಳಗಿಳಿಯದಂತೆ 33 ವರ್ಷ ವಯಸ್ಸಿನವರಿಗೆ ವೈಯಕ್ತಿಕವಾಗಿ ಹೇಳಿದ್ದೇನೆ ಎಂದು ಹೇಳಿಕೆ ನೀಡಿದ್ದರು. ಗಂಗೂಲಿ ಅವರ ಈ ಹೇಳಿಕೆಯನ್ನು ಸುದ್ದಿಗೋಷ್ಠಿಯಲ್ಲಿ ಪರೋಕ್ಷವಾಗಿ ವಿರೋಧಿಸಿದ್ದರು.

ಜಯ್ ಶಾ ಮಧ್ಯ ಪ್ರವೇಶ

ಶೋಕಾಸ್ ನೋಟಿಸ್ ನೀಡಲು ಮುಂದಾಗಿದ್ದ ಸೌರ್ ಗಂಗೂಲಿ ನಿರ್ಧಾರಕ್ಕೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಡೆಯೊಡ್ಡಿದ್ದರು. ದಕ್ಷಿಣ ಆಫ್ರಿಕಾ ವಿರುದ್ಧದ ಮಹತ್ವದ ಸರಣಿ ಆರಂಭಕ್ಕೂ ಮೊದಲು ಹೀಗೆ ಶೋಕಾಸ್ ನೋಟಿಸ್ ನೀಡಿದರೆ ಅದು ತಂಡದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎ ಂದು ಗಂಗೂಲಿಯವರ ಮನವೊಲಿಸಿದ್ದರು ಎಂದು ಪ್ರಮುಖ ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ.

Home add -Advt

ಅಷ್ಟರೊಳಗೆ ಟಿ 20 ನಾಯಕತ್ವದಿಂದ ಹಿಂದೆ ಸರಿಯುವ ನಿರ್ಧಾರವನ್ನು ಕೋಹ್ಲಿ ಪ್ರಕಟಿಸಿದ್ದರು. ಆ ಸಮಯದಲ್ಲಿ ಬಿಸಿಸಿಐನಿಂದ ಯಾವುದೇ ಕ್ರಮವನ್ನು ತೆಗೆದುಕೊಳ್ಳದಿದ್ದರೂ, ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ ಅವರು ದಕ್ಷಿಣ ಆಫ್ರಿಕಾ ಪ್ರವಾಸಕ್ಕಾಗಿ ತಂಡವನ್ನು ಘೋಷಿಸಲು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ವಿಶ್ವಕಪ್‌ಗೆ ಮುನ್ನ ಟಿ 20 ಐ ನಾಯಕತ್ವ ತ್ಯಜಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಸೂಚಿಸಿದ್ದರು. ಸಭೆಯಲ್ಲಿ ಎಲ್ಲ ಸದಸ್ಯರು ವಿರಾಟ್ ಕೊಹ್ಲಿಗೆ ಈ ಕುರಿತು ಮನವಿ ಮಾಡಿಕೊಂಡಿದ್ದರು.

ಆದಾಗ್ಯೂ, ಕೊಹ್ಲಿ ಮತ್ತು ಹೊಸದಾಗಿ ನೇಮಕಗೊಂಡ ನಾಯಕ ರೋಹಿತ್ ಶರ್ಮಾ ನಡುವಿನ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಬಿಸಿಸೈ ಸ್ಪಷ್ಟಪಡಿಸಿದೆ. ಏತನ್ಮಧ್ಯೆ, ವಿರಾಟ್ ಕೊಹ್ಲಿ ಅವರು ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಯ ಸೋಲಿನ ಬಳಿಕ ಟೆಸ್ಟ್ ತಂಡದ ನಾಯಕತ್ವವನ್ನೂ ತ್ಯಜಿಸಿದ್ದಾರೆ.
ರಾಜ್ಯದಲ್ಲಿ ವೀಕ್ ಎಂಡ್ ಕರ್ಫ್ಯೂ ರದ್ದು

Related Articles

Back to top button