ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಾದ್ಯಂತ ನಾಳೆಯಿಂದ ವೀಕೆಂಡ್ ಕರ್ಫ್ಯೂ ತೆರವುಗೊಳಿಸಲಾಗಿದೆ. ಆದರೆ ನೈಟ್ ಕರ್ಫ್ಯೂ ಎಂದಿನಂತೆ ಮುಂದುವರೆಯಲಿದೆ ಎಂದು ಕಂದಾಯ ಸಚಿವ ಆರ್.ಅಸೋಕ್ ತಿಳಿಸಿದ್ದಾರೆ.
ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಸಚಿವ ಆರಶೋಕ್, ವೀಕೆಡ್ ಕರ್ಫ್ಯೂ ವಾಪಸ್ ಪಡೆಯಲಾಗಿದೆ. ರಾತ್ರಿ 10 ಗಂಟೆಯಿಂದ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಮುಂದುವರೆಯಲಿದೆ. ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚಾದರೆ ವೀಕೆಂಡ್ ಕರ್ಫ್ಯೂ ಏರಿದಂತೆ ಕಠಿಣ ನಿಯಮ ಜಾರಿಯಾಗಲಿದೆ ಎಂದರು.
ತಾಂತ್ರಿಕ ಸಲಹಾ ಸಮಿತಿ ನೀಡಿದ ಸಲಹೆಯಂತೆ ಕ್ರಮ ಕೈಗೊಳ್ಳಲಾಗಿದೆ. ಮದುವೆ, ಸಭೆ, ಸಮಾರಂಭ, ಧರಣಿ, ಪ್ರತಿಭಟನೆ, ಅಂತ್ಯಸಂಸ್ಕಾರಕ್ಕೆ ನಿರ್ಬಂಧ ಮುಂದುವರೆಯಲಿದೆ. ಹೋಟೆಲ್, ಬಾರ್, ಕ್ಲಬ್ ಗಳಲ್ಲಿ 50:50 ನಿಯಮ ಮುಂದುವರೆಯಲಿದೆ. ಥಿಯೇಟರ್ ಗಳಲ್ಲಿ ಶೇ.100ರಷ್ಟು ಹಾಗೂ ಮಾಲ್ ಗಳಿಗೆ ಶೇ.50ರಷ್ಟು ಜನರಿಗೆ ಅವಕಾಶ ನೀಡಲಾಗಿದೆ.
ಗಡಿ ಭಾಗಗಳಲ್ಲಿ ಇನ್ನಷ್ಟು ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಬೆಂಗಳೂರು ಹೊರತು ಪಡಿಸಿ ಉಳಿದೆಡೆ ಶಾಲೆಗಳು ಮುಂದುವರೆಯಲಿವೆ. ಒಂದು ವೇಳೆ ಕೋವಿಡ್ ಕೇಸ್ ಹೆಚ್ಚಾದರೆ ಶಾಲೆಗಳನ್ನು ಬಂದ್ ಮಾಡಲಾಗುವುದು ಎಂದು ವಿವರಿಸಿದರು..
ಶಾಲೆ ಬಂದ್ ಮಾಡುವುದಕ್ಕೆ ಹೊಸ ಸೂತ್ರ: ಶಿಕ್ಷಣ ಸಚಿವರ ಗೈಡ್ಲೈನ್ ಇಲ್ಲಿದೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ