Kannada NewsLatest

ಹೊಸ ವಂಟಮುರಿ ಗ್ರಾಮದಲ್ಲಿ ಶಾಲಾ ಕೋಣೆಗಳ ಉದ್ಘಾಟನೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಶಿಕ್ಷಕರು ಆದ್ಯತೆ ನೀಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು.

ಯಮಕನಮರಡಿ ಮತಕ್ಷೇತ್ರದ ಹೊಸ ವಂಟಮುರಿ ಗ್ರಾಮದಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ಸರ್ಕಾರಿ ಮಾದರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ನಾಲ್ಕು ಕೋಣೆ, 16 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ನೂತನ ಅಂಗನವಾಡಿ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಸ್ತುತ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಅಗತ್ಯ. ಆದ್ದರಿಂದ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗದಂತೆ ಕ್ಷೇತ್ರದ ಎಲ್ಲಾ ಶಾಲೆಗಳಿಗೆ ಮೂಲ ಸೌಕರ್ಯ ಒದಗಿಸಲಾಗಿದೆ. ಇನ್ನೂ ಏನಾದರೂ ಸಮಸ್ಯೆಗಳಿದ್ದರೆ ನನ್ನ ಗಮನಕ್ಕೆ ತನ್ನಿ, ಅವುಗಳಿಗೆ ಸ್ಪಂದಿಸಲಾಗುವುದು ಎಂದು ಭರವಸೆ ನೀಡಿದರು.

ನಂತರ ಸರ್ಕಾರಿ ಮಾದರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದರು. ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರನ್ನು ಶಿಕ್ಷಕರು ಸನ್ಮಾನಿಸಿದರು.

ಇದೇ ವೇಳೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಅಂಬೇಡ್ಕರ್‌ ಭವನ ಉದ್ಘಾಟಿಸಿ, ಹೊಸ ವಂಟಮುರಿ ಗ್ರಾಮದಿಂದ ಇಸ್ಲಾಂಪುರ ವರೆಗೆ 4 ಕೋಟಿ ರೂ. ವೆಚ್ಚದ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮುಖಂಡರಾದ ಈರಪ್ಪ ಪಾಟೀಲ್ , ಬಸು ಜಿದ್ದಿ, ರಾಮಣ್ಣ ಗುಳ್ಳಿ, ಹನುಮಂತ ಮುದಗನ್ಬವರ, ಮಾರುತಿ ಮಸ್ತಿ, ಸಿದ್ದಪ್ಪ ಹೊಳಿಕರ, ಸೂರಜ ಜಿಂಡ್ರಾಳಿ, ಲಗಮನಗೌಡ ಪಾಟೀಲ್, ಶಿವಪ್ಪ ಹುನ್ನೂರಿ, ಸುರೇಶ ನಾಯ್ಕ ಸೇರಿದಂತೆ ಶಿಕ್ಷಕರು, ಶಿಕ್ಷಕಿಯರು ಉಪಸ್ಥಿತರಿದ್ದರು.
ರಾಜ್ಯದಲ್ಲಿ ಮುಂದಿನ ವಾರ ಕೊರೋನಾ ಉತ್ತುಂಗಕ್ಕೆ : ಸಮಗ್ರ ಮಾಹಿತಿ ಬಿಚ್ಚಿಟ್ಟ ಸಿಎಂ ನೇತೃತ್ವದ ಸಭೆ; ನಿರ್ಲಕ್ಷ್ಯ ಬೇಡವೇ ಬೇಡ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button