Latest

24 ಗಂಟೆಯಲ್ಲಿ 3,37,704 ಜನರಲ್ಲಿ ಹರಡಿದ ಕೊರೊನಾ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರೊನಾ ಅಟ್ಟಹಾಸ ಜೋರಾಗಿದ್ದು, ಕಳೆದ 24 ಗಂಟೆಯಲ್ಲಿ 3,37,704 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕೊರೊನಾ ನಡುವೆ ರೂಪಾಂತರಿ ವೈರಸ್ ಒಮಿಕ್ರಾನ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, 10,050 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಕಳೆದ 24 ಗಂಟೆಯಲ್ಲಿ 488 ಜನ ಕೋವಿಡ್ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 488884ಕ್ಕೆ ಏರಿಕೆಯಾಗಿದೆ.

Home add -Advt

ಇನ್ನು ದೇಶದಲ್ಲಿ 2113365 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 242676 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Related Articles

Back to top button