ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೊರೊನಾ ಎರಡನೇ ಅಲೆಯಲ್ಲಿಯೂ ದೇವೇಗೌಡರಿಗೆ ಕೊರೊನಾ ಸೋಂಕು ತಗುಲಿತ್ತು. ದೇವೇಗೌಡರಿಗೆ ಕೆಮ್ಮು ಇದ್ದ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಗೆ ಒಳಗಾಗಿದ್ದರು. ಈ ವೇಳೆ ಕೋವಿಡ್ ಪಾಸಿಟಿವ್ ಬಂದಿದೆ.
ಕೊರೊನಾ ಸೋಂಕು ದೃಢವಾದ ಹಿನ್ನೆಲೆಯಲ್ಲಿ ದೇವೇಗೌಡರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
24 ಗಂಟೆಯಲ್ಲಿ 3,37,704 ಜನರಲ್ಲಿ ಹರಡಿದ ಕೊರೊನಾ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ