ಯಮಕನಮರಡಿಯಲ್ಲಿ ಆರ್ಮಿ, ಪೊಲೀಸ್ ಟ್ರೇನಿಂಗ್ ಸೆಂಟರ್ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ರಾಹುಲ್ ಜಾರಕಿಹೊಳಿ ಅಭಿಮಾನಿ ಬಳಗದ ನೂತನ ಘಟಕ ಉದ್ಘಾಟನೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಯಮಕನಮರಡಿ ಭಾಗದಲ್ಲಿ ಮುಂದಿನ ದಿನಗಳಲ್ಲಿ ಇಪ್ಪತ್ತು ಎಕರೆ ಜಾಗ ಖರೀದಿಸಿ ಆರ್ಮಿ, ಪೊಲೀಸ್ ಟ್ರೇನಿಂಗ್ ಸೆಂಟರ್ ಪ್ರಾರಂಭಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.
ಯಮಕನಮರಡಿ ಕ್ಷೇತ್ರದ ಶಹಾಬಂದರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ರಾಹುಲ್ ಜಾರಕಿಹೊಳಿ ಅಭಿಮಾನಿ ಬಳಗದ ನೂತನ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸಾಂಸ್ಕೃತಿಕ, ಶೈಕ್ಷಣಿಕ, ಕ್ರೀಡೆಗಳು, ಬಾಡಿ ಬಿಲ್ಡಿಂಗ್ ಕಾರ್ಯಕ್ರಮ ಸೇರಿದಂತೆ ಈಚೆಗೆ ಘಟಪ್ರಭಾ ಸೇವಾದಳದಲ್ಲಿ ಆರ್ಮಿ ಮತ್ತು ಪೊಲೀಸ್ ತರಬೇತಿ ಕೂಡ ನೀಡಲಾಗುತ್ತಿದೆ ಎಂದರು.
ಎಲ್ಲಾ ಕೆಲಸ ಸರ್ಕಾರ ಮಾಡುವುದು ಕಷ್ಟ. ಆದ್ದರಿಂದ ಸರ್ಕಾರ ಎಷ್ಟು ಕೆಲಸ ಮಾಡುತ್ತದೆ, ಅಷ್ಟೇ ಕೆಲಸ ನಾವು ಖಾಸಗಿವಾಗಿ ಮಾಡುತ್ತಿದ್ದು, ಈಗಾಗಲೇ ಸತೀಶ್ ಜಾರಕಿಹೊಳಿ ಫೌಂಡೇಶನ್, ಸತೀಶ್ ಶುಗರ್ಸ ಮೂಲಕ ಹಲವು ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸ್ವಚ್ಛತಾ ಕಾರ್ಯಕ್ಕೂ ಮುಂದಾಗಿದ್ದೇವೆ ಎಂದು ತಿಳಿಸಿದರು.
ಜಿಲ್ಲೆಯ ಎಲ್ಲಾ ಕನ್ನಡ ಮಾಧ್ಯಮ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಅದಕ್ಕಾಗಿ 13 ಲಕ್ಷ ರೂ. ಖರ್ಚು ಮಾಡಲಾಗುತ್ತಿದ್ದು, ವಿದ್ಯಾರ್ಥಿಗಳು ಈ ಪುಸ್ತಕಗಳನ್ನು ಓದಿ ಜ್ಞಾನ ಹೆಚ್ಚಿಸಿಕೊಳ್ಳಬೇಕೆಂದು ಕರೆ ನೀಡಿದರು.
ರಾಹುಲ್ ಜಾರಕಿಹೊಳಿ ಅಭಿಮಾನಿ ಬಳಗದ ಸಂಘ ಜಿಲ್ಲೆಯಲ್ಲಿ ಕಳೆದ ಆರು ತಿಂಗಳ ಹಿಂದೆ ಪ್ರಾರಂಭವಾಗಿದ್ದು, ಈ ಸಂಘ ಇನ್ನೂ ಬಹಳಷ್ಟು ಬೆಳೆದು ಸಮಾಜಮುಖಿ ಕಾರ್ಯಗಳನ್ನು ಮಾಡಲು ಮುಂದಾಗಬೇಕು ಎಂದು ಸಲಹೆ ನೀಡಿದರು.
ಯುವ ನಾಯಕ ರಾಹುಲ್ ಜಾರಕಿಹೊಳಿ ಮಾತನಾಡಿ, ಯುವಕರು ಈ ದೇಶದ ಶಕ್ತಿಯಾಗಿದ್ದು, ದೇಶದ ಪ್ರಗತಿಗೆ ಶ್ರಮಿಸಬೇಕು. ಶಹಾಬಂದರ ಗ್ರಾಮದಲ್ಲಿ ಅಭಿಮಾನಿ ಬಳಗದಿಂದ ಒಳ್ಳೆಯ ಕಾರ್ಯಕ್ರಮ ನಡೆಯಲಿ. ಅದಕ್ಕೆ ಬೇಕಾದ ಎಲ್ಲಾ ರೀತಿಯ ಸಹಕಾರ ನಾನು ಮತ್ತು ನಮ್ಮ ತಂದೆ ಸತೀಶ್ ಜಾರಕಿಹೊಳಿ ಅವರು ನೀಡುತ್ತೇವೆ ಎಂದು ಭರವಸೆ ನೀಡಿದರು.
ಶಿಕ್ಷಣದ ಜತೆಗೆ ಕ್ರೀಡೆಗಳಿಗೂ ಆದ್ಯತೆ ನೀಡಿ, ಸಂಘದ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಿ ಎಂದು ತಿಳಿಸಿದ ಅವರು, ಸತೀಶ್ ಜಾರಕಿಹೊಳಿ ಫೌಂಡೇಶನ್ ಮೂಲಕ ಎಲ್ಲಾ ಗ್ರಾಮದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದು, ಮುಂದಿನ ದಿನಗಳಲ್ಲಿ ನಿಮ್ಮ ಗ್ರಾಮದಲ್ಲಿಯೂ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಗುವುದು ಎಂದರು.
ಇದೇ ವೇಳೆ ಹತ್ತನೇ ತರಗತಿ ಹಾಗೂ ಪಿಯುಸಿ, ಡಿಗ್ರಿ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.
ವಿಶೇಷ ಸಾಧನೆಗೈದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೂ ಸನ್ಮಾನಿಸಲಾಯಿತು. ರಾಹುಲ್ ಅಭಿಮಾನಿ ಬಳಗದಿಂದ ಟಾರ್ಗೆಟ್ ಕೋಚಿಂಗ್ ಸೆಂಟರ್ ಬೆಳಗಾವಿಯಲ್ಲಿ ಐದು ವಿದ್ಯಾರ್ಥಿಗಳಿಗೆ ಉಚಿತ ಸ್ಪರ್ಧಾತ್ಮಕ ತರಬೇತಿ ನೀಡಲು ಸಾಕೇಂತಿಕ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಆರ್.ಎಸ್.ಜೆ ಅಧ್ಯಕ್ಷ ಮಾರುತಿ ನಿರ್ವಾಣಿ, ಬಸವರಾಜ ನಿರ್ವಾಣಿ, ಮಾರುತಿ ನಡಗಡ್ಡಿ, ಶಿವರಾಯ ಭುಕನಟ್ಟಿ, ರಾಜು ನಾಶಿಪುಡಿ, ಗ್ರಾ.ಪಂ.ಅಧ್ಯಕ್ಷ ಶಂಕರ ಡೊಂಬರಿ, ವಿ.ಪಿ. ಪ್ರಕಾಶ್, ಡಿ.ಎಫ್. ಮುಲ್ಲಾ, ಬಸು ದುಮ್ಮನಾಯ್ಕ, ಯಲ್ಲಪ್ಪ ಹಂಚಿನಮನಿ, ಮಂಜುಗೌಡ ಪಾಟೀಲ್, ಬಸವರಾಜ ನಾಯ್ಕ, ರಾಮಚಂದ್ರ ನಾಯ್ಕ ಸೇರಿದಂತೆ ಇತರರು ಇದ್ದರು.
ಸಚಿವ ಮುರುಗೇಶ್ ನಿರಾಣಿ ವಿರುದ್ಧ ಬಸವ ಜಯಮೃತ್ಯುಂಜಯ ಶ್ರೀ ಕೆಂಡಾಮಂಡಲ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ