Latest

ತುಮಕೂರು ಜಿಲ್ಲೆಯೇನು ನಿಮ್ಮಪ್ಪನ ಜಹಗೀರಾ? ವಿನಾಶಕಾಲೇ ವಿಪರೀತ ಸುಳ್ಳು; ಸಿದ್ದರಾಮಯ್ಯ ವಿರುದ್ಧ ಹೆಚ್ ಡಿಕೆ ಕಿಡಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಚಾಮುಂಡೇಶ್ವರಿ ಕ್ಷೇತ್ರದಿಂದ ಜನರು ಓಡಿಸಿದ್ದು ಮರೆತುಬಿಟ್ಟಿರಾ? ಈಸಲ ಬಾದಾಮಿಯಿಂದಲೂ ಓಡಬೇಕಾಗುತ್ತದೆ ಎಂದು ಗುಡುಗಿದ್ದಾರೆ.

ತುಮಕೂರಿನಿಂದ ಜೆಡಿಎಸ್ ಓಡಿಸಿ ಎನ್ನುವುದಕ್ಕೆ ತುಮಕೂರು ಜಿಲ್ಲೆಯೇನು ನಿಮಪ್ಪನ ಜಹಗೀರಾ? ಅಥವಾ ಕಾಂಗ್ರೆಸ್ ನ ಪಿತ್ರಾರ್ಜಿತ ಆಸ್ತಿಯಾ? ಎಂದು ಪ್ರಶ್ನಿಸಿರುವ ಕುಮಾರಸ್ವಾಮಿ, ಚಾಮುಂಡೇಶ್ವರಿ ಕ್ಷೇತ್ರದಿಂದ ಜನರು ಓಡಿಸಿದ್ದಾರೆ. ಈಗ ಬಾದಾಮಿಯಿಂದಲೂ ಓಡಿಸುತ್ತಾರೆ ಎಂದು ಸರಣಿ ಟ್ವೀಟ್ ಮೂಲಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಸೇರುವ ಮೊದಲು ನೀವು ಯಾರ ಬಾಲಂಗೋಚಿಯಾಗಿದ್ದಿರಿ? ಗುರುಸ್ವಾಮಿ ಅವರೆದುರು ಸೋತುಸುಣ್ಣವಾದ ಮೇಲೆ ಅನುಗ್ರಹಕ್ಕೆ ಬಂದು ಯಾರ ಮುಂದೆ ಅತ್ತು ರಾಜಕೀಯ ಬಿಟ್ಟು ವಕೀಲಿ ಮಾಡುತ್ತೇನೆ ಎಂದಿರಿ ನೆನೆಪಿದೆಯಾ ಸಿದ್ದರಾಮಯ್ಯ? ಆಗ ನಿಮಗೆ ಬಾಲಂಗೋಚಿತನ ನೆನಪಾಗಲಿಲ್ಲವೇ? ಪ್ರತಿಯೊಂದಕ್ಕೂ ಸರಕಾರಕ್ಕೆ ಜೆಡಿಎಸ್ ಬೆಂಬಲ ನೀಡುತ್ತಿದೆ ಎನ್ನುವ ನಿಮ್ಮ ಸುಳ್ಳು ನಾಲಗೆ ಅದೇ ಸರಕಾರ ಬರಲು ಮೂಲ ಕಾರಣರಾದ ಸಿದ್ದಪುರುಷ ಯಾರು ಎನ್ನುವುದನ್ನು ಹೇಳಲಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಮತ್ತೆ ಮುಖ್ಯಮಂತ್ರಿಯಾಗಬೇಕು ಎಂಬ ದುರಾಸೆ, ಅವಕಾಶ ಸಿಗದೇನೋ ಎನ್ನುವ ಹತಾಶೆ. ಅಭ್ಯರ್ಥಿಗಳಿಲ್ಲ, ಜೆಡಿಎಸ್ ಬಿಟ್ಟರೆ ಗತಿ ಇಲ್ಲ ನಿಮ್ಮ ಯೋಗ್ಯತೆಗೆ. ನಮ್ಮವರನ್ನು ಹೈಜಾಕ್ ಮಾಡಿ ಅವರಿಗೆ ಟಿಕೆಟ್ ಆಮಿಷ ತೋರಿಸಿ ಮೂಲ ಕಾಂಗ್ರೆಸ್ಸಿಗರನ್ನು ಮೂಲೆಗೆ ತಳ್ಳುವ ಕಂತ್ರಿ ರಾಜಕೀಯ ಎಲ್ಲರಿಗೂ ಗೊತ್ತಿದೆ.

ಆಶ್ರಯ ಕೊಟ್ಟ ಪಕ್ಷವನ್ನು ಅಲ್ಲಿನ ಮೂಲ ನಿವಾಸಿಗಳನ್ನು ಮುಗಿಸುವುದೇ ಸಿದ್ಧಾಂತವೇ? ನೀವು ಜೆಡಿಎಸ್ ಸಿದ್ಧಾಂತದ ಬಗ್ಗೆ ಮಾತನಾಡುತ್ತೀರಿ ನಾಚಿಕೆಯಾಗಬೇಕು ನಿಮಗೆ. ಸುಳ್ಳು ನಿಮ್ಮ ರಾಜಕೀಯದ ಅಡಿಪಾಯ. ಸುಳ್ಳೇ ನಿಮ್ಮ ರಾಜಕೀಯ ಅಸ್ತಿತ್ವದ ಪ್ರತಿರೂಪ. ಸುಳ್ಳು ನಿಮ್ಮ ನರಿ ಬುದ್ಧಿ ಅವಕಾಶವಾದಿ ರಾಜಕಾರಣ ನಿಜಸ್ವರೂಪ ಎಂದು ವಿನಾಶಕಾಲೇ ವಿಪರೀತ ಸುಳ್ಳು ಎಂದು ಟ್ಯಾಗ್ ಲೈನ್ ನೀಡಿ ಕಿಡಿಕಾರಿದ್ದಾರೆ.

ಸಚಿವ ಮುರುಗೇಶ್ ನಿರಾಣಿ ವಿರುದ್ಧ ಬಸವ ಜಯಮೃತ್ಯುಂಜಯ ಶ್ರೀ ಕೆಂಡಾಮಂಡಲ
ದರ ಏರಿಕೆ ಆತಂಕದಲ್ಲಿದ್ದ ಜನತೆಗೆ ರಿಲೀಫ್

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button