Latest

ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ.ಎಲ್.ಮಂಜುನಾಥ್ ವಿಧಿವಶ; ಸಿಎಂ ಸಂತಾಪ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ.ಎಲ್.ಮಂಜುನಾಥ್ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಅವರಿಗೆ 68 ವರ್ಷ ವಯಸ್ಸಾಗಿತ್ತು.

ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆಯ ಸಮೀಪದ ತಮ್ಮ ಸ್ವಗೃಹದಲ್ಲಿ ತಡ ರಾತ್ರಿ 12 ಗಂಟೆ ಸುಮಾರಿಗೆ ಕೆ.ಎಲ್.ಮಂಜುನಾಥ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಕುಣಿಗಲ್ ರಸ್ತೆಯ ಕೆಂಪಲಿಂಗನಹಳ್ಳಿಯ ಅವರ ತೋಟದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

1974ರಲ್ಲಿ ಕೆ.ಎಲ್.ಮಂಜುನಾಥ್ ಕರ್ನಾಟಕ ಹೈಕೋರ್ಟ್ ನಲ್ಲಿ ಅಭ್ಯಾಸ ಮಾಡಿದ್ದರು. ಬಳಿಕ 2000ದಲ್ಲಿ ಹೈಕೋರ್ಟ್ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು. 2001ರಲ್ಲಿ ಖಾಯಂ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು. 2015 ಏಪ್ರಿಲ್ 20ರಂದು ಹಿರಿಯ ನ್ಯಾಯಮೂರ್ತಿಯಾಗಿ ನಿವೃತ್ತಿಹೊಂದಿದ್ದರು.

ಕರ್ನಾಟಕ ನದಿ ಮತ್ತು ಗಡಿ ವಿವಾದ ಪ್ರಾಧಿಕಾರಗಳ ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

 ಮುಖ್ಯಮಂತ್ರಿ ಸಂತಾಪ

ಹೈಕೋರ್ಟಿನ ನಿವೃತ್ತ ನ್ಯಾಯಾಧೀಶ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ನ್ಯಾಯಮೂರ್ತಿ ಮಂಜುನಾಥ್ ಅವರು ಅತ್ಯುತ್ತಮ ವಕೀಲರಾಗಿ, ವಕೀಲರ ಸಂಘದ ಅಧ್ಯಕ್ಷರಾಗಿ, ಹೈ ಕೋರ್ಟ್ ನ್ಯಾಯಾಧೀಶರಾಗಿ, ಕರ್ನಾಟಕ ನದಿ ನೀರು ಮತ್ತು ಗಡಿ ವಿವಾದ ಪ್ರಾಧಿಕಾರದ ಅಧ್ಯಕ್ಷರಾಗಿ, ಆಂಧ್ರ ಪ್ರದೇಶದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಸಲ್ಲಿಸಿದ ಸೇವೆ ಅವಿಸ್ಮರಣೀಯ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬದವರು ಹಾಗೂ ಹಿತೈಷಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸು ವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

 

ಅಲ್ಲು ಅರ್ಜುನ್ ಸಿನೇಮಾ ಬಿಡುಗಡೆಗೆ ತಂದೆಯೇ ಅಡ್ಡಿ ! ಕಾರಣ ಗೊತ್ತಾ?

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button