ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ದೇಶಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇದೀಗ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಸ್ವತ: ಟ್ವೀಟ್ ಮೂಲಕ ಮಾಹಿತಿ ನೀಡಿರುವ ವೆಂಕಯ್ಯ ನಾಯ್ಡು, ತಮಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಒಂದು ವಾರ ಕಾಲ ಸೆಲ್ಫ್ ಐಸೋಲೇಷನ್ ಆಗುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಕೋವಿಡ್ ಟೆಸ್ಟ್ ಮಾಡಿಸಿಕೊಂಡು ಐಸೋಲೇಟ್ ಆಗುವಂತೆ ಮನವಿ ಮಾಡಿದ್ದಾರೆ.
ವೆಂಕಯ್ಯ ನಾಯ್ಡು ಅವರು ಸದ್ಯ ಹೈದರಾಬಾದ್ ನಲ್ಲಿ ಇದ್ದು, ಕೋವಿಡ್ ಟೆಸ್ಟ್ ವೇಳೆ ವರದಿಯಲ್ಲಿ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಸೆಲ್ಫ್ ಐಸೋಲೇಷನ್ ಆಗಲು ನಿರ್ಧರಿಸಿದ್ದಾರೆ.
ಕವಟಗಿಮಠ, ವಿಶ್ವನಾಥ ಪಾಟೀಲ್ ಗೆ ಕೊರೋನಾ: ಸಭೆಯಲ್ಲಿದ್ದ ಬಿಜೆಪಿ ಮುಖಂಡರಿಗೆಲ್ಲ ಆತಂಕ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ