Kannada NewsKarnataka News

ಹಿರೇಬಾಗೇವಾಡಿಯಲ್ಲಿ ಕಾಲೇಜು ಕಟ್ಟಡ ಉದ್ಘಾಟಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್

 

ಗ್ರಾಮೀಣ ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಮೊದಲ ಆದ್ಯತೆ: ಲಕ್ಷ್ಮೀ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:

ಬೆಳಗಾವಿ ಗ್ರಾಮೀಣಕ್ಷೇತ್ರದಲ್ಲಿ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಕ್ಷೇತ್ರದಲ್ಲಿ ವಿಶೇವಾಗಿ ಯಾವುದೇ ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು, ಈ ಹಿನ್ನೆಲೆಯಲ್ಲಿ ಶಿಕ್ಷಣಕ್ಕೆ ಅಗತ್ಯವಿರುವ ಎಲ್ಲಾ ಮೂಲಸೌಕರ್ಯಗಳನ್ನು ಕಲ್ಪಿಸಲು ಶ್ರಮವಹಿಸುತ್ತಿದ್ದೇನೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಹಿರೇಬಾಗೇವಾಡಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ ಹಾಗೂ ನಬಾರ್ಡ್ ಅನುದಾನದಲ್ಲಿ 1.50 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸರಕಾರಿ ಪದವಿ ಪೂರ್ವ ಕಾಲೇಜು ಕಟ್ಟಡವನ್ನು, ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರೊಂದಿಗೆ ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.
ಕಾಲೇಜಿನ ಉದ್ಘಾಟನೆಯ ದಿನ ಸುವರ್ಣ ಅಕ್ಷರಗಳಿಂದ ಬರೆಯುವ ದಿನವಾಗಿದೆ, ಈ ಕಾಲೇಜು ಹಿರೇಬಾಗೇವಾಡಿ ಸುತ್ತಮುತ್ತಲಿನ ಸುಮಾರು ಇಪ್ಪತ್ತಕ್ಕೂ ಹೆಚ್ಚಿನ ಗ್ರಾಮಗಳ ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಪೂರಕವಾಗಲಿದೆ. ಗ್ರಾಮೀಣ ಭಾಗದಲ್ಲಿ ಇಂತಹ ಸುಸಜ್ಜಿತ ಕಾಲೇಜುಗಳು ಅಪರೂಪ. ವಿದ್ಯಾರ್ಥಿಗಳ ಉಜ್ವಲ ಭವಿಷ್ಯದ ದೃಷ್ಟಿಯಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಯಾವುದೇ ಹಿನ್ನಡೆಯಾಗಬಾರದೆಂದು ಈ ಕಾಲೇಜಿನ ಅಭಿವೃದ್ಧಿಯನ್ನು ಕೈಗೆತ್ತಿಕೊಂಡು ಯಶಸ್ವಿಯಾಗಿದ್ದೇನೆ ಎಂದರು.
ಇದೇ ವೇಳೆ ಕಾಲೇಜಿಗೆ ಡೆಸ್ಕ್ ಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಸಿ ಸಿ ಪಾಟೀಲ, ಅಡಿವೇಶ ಇಟಗಿ, ಬಿ ಎನ್ ಪಾಟೀಲ, ಸಮೀನ ನದಾಫ್, ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಸ್ವಾತಿ ಇಟಗಿ, ಉಪಾಧ್ಯಕ್ಷ ನಾಜರಿನ್ ಕರಿದಾವಲ್, ಶ್ರೀಕಾಂತ, ಗೌಸ್ ಜಾಲಿಕೊಪ್ಪ, ಬಸವರಾಜ ತೋಟಗಿ, ಸುರೇಶ ಇಟಗಿ, ನಿಂಗಪ್ಪ ತಳವಾರ, ಬಸನಗೌಡ ಪಾಟೀಲ, ಗೌರಮ್ಮ ಪಾಟೀಲ, ಕಾಲೇಜಿನ ಸಿಬ್ಬಂದಿಯವರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

 

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button