ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಕಾರಿಗೆ ಟಿಪ್ಪರ್ ಡಿಕ್ಕಿಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಮಾಚೇನಹ-ಳ್ಳಿ ಕೈಗಾರಿಕಾ ಪ್ರದೇಶದ ಬಳಿ ನಡೆದಿದೆ.
ವೇಗವಾಗಿ ಬಂದ ಟಿಪ್ಪರ್ ಮೊದಲು ಡಿವೈಡರ್ ಗೆ ಡಿಕ್ಕಿಹೊಡೆದು ಬಳಿಕ ಕಾರಿಗೆ ಗುದ್ದಿದೆ. ಪರಿಣಾಮ ಕಾರಿನಲ್ಲಿದ್ದ 39 ವರ್ಷದ ಷಣ್ಮುಗ ಹಾಗೂ 40 ವರ್ಷದ ರಾಮಚಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತ ಸಂಭವಿಸುತ್ತಿದ್ದಂತೆ ಟಿಪ್ಪರ್ ಚಾಲಕ ವಾಹನ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ. ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಮೃತರಿಬ್ಬರೂ ಭದ್ರವತಿ ನಿವಾಸಿಗಳು ಎಂದು ತಿಳಿದುಬಂದಿದೆ.
ಪೇಪರ್ ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ