ಪ್ರಗತಿವಾಹಿನಿ ಸುದ್ದಿ, ಹೊಸದಿಲ್ಲಿ:
ಪ್ರಧಾನಿ ಮೋದಿ ಅವರ ಬಯೋಪಿಕ್ ಪಿಎಂ ನರೇಂದ್ರ ಮೋದಿ ಚಿತ್ರವನ್ನು ಸಂಪೂರ್ಣ ವೀಕ್ಷಿಸುವಂತೆ ಚುನಾವಣೆ ಆಯೋಗಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ಸಿನಿಮಾವನ್ನು ಪೂರ್ಣವಾಗಿ ವೀಕ್ಷಿಸಿದ ನಂತರ ನಿಷೇಧದ ಕುರಿತಾದ ನಿರ್ಧಾರ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. .
ಸೀಲ್ ಮಾಡಿದ ಲಕೋಟೆಯಲ್ಲಿ ತನ್ನ ತೀರ್ಮಾನವನ್ನು ಸುಪ್ರೀಂ ಕೋರ್ಟ್ಗೆ ಕಳುಹಿಸಿ ಕೊಡುವಂತೆ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಪೀಠ ತಿಳಿಸಿ, ಏಪ್ರಿಲ್ 22ಕ್ಕೆ ವಿಚಾರಣೆ ಮುಂದೂಡಿದೆ. ಚುನಾವಣೆ ಆಯೋಗ ಪಿಎಂ ಮೋದಿ ಚಿತ್ರದ ಮೇಲೆ ಹೇರಿರುವ ನಿಷೇಧವನ್ನು ಪ್ರಶ್ನಿಸಿ, ಸಿನಿಮಾ ನಿರ್ಮಾಪಕರ ಪರ ಹಿರಿಯ ವಕೀಲ ಮುಕುಲ್ ರೋಹ್ಟಗಿ ವಾದಿಸುತ್ತಿದ್ದಾರೆ. ಕೇವಲ ಸಿನಿಮಾದ ಪ್ರೋಮೋ ನೋಡಿ, ನಿಷೇಧ ಮಾಡಲಾಗಿದೆ. ಚಿತ್ರವನ್ನು ಸಂಪೂರ್ಣವಾಗಿ ನೋಡಿಲ್ಲ ಎಂದು ವಾದಿಸಿದರು.
ಚುನಾವಣೆ ಆಯೋಗದ ಅಧಿಕಾರಿಗಳಿಗೆ ವಿಶೇಷ ಸಿನಿಮಾ ಪ್ರದರ್ಶನ ಏರ್ಪಡಿಸುವುದಾಗಿಯೂ ತಿಳಿಸಿದ್ದಾರೆ. ಲೋಕಸಭೆ ಚುನಾವಣೆ ಇರುವುದರಿಂದ ಪಿಎಂ ನರೇಂದ್ರ ಮೋದಿ ಚಿತ್ರ ಬಿಡುಗಡೆಗೆ ನಿಷೇಧ ಹೇರಿತ್ತು. ಏಪ್ರಿಲ್ 19ಕ್ಕೆ ಪಿಎಂ ಮೋದಿ ಚಿತ್ರ ತಂಡ ಚಿತ್ರವನ್ನು ಬಿಡುಗಡೆ ಮಾಡಲು ಮುಂದಾಗಿತ್ತು.
ಮೋದಿ ಬಯೋಪಿಕ್ ಗೆ ಚುನಾವಣೆ ಆಯೋಗ ತಡೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ