Latest

ಹಿರಿಯ ನಿರ್ದೇಶಕ ಕಟ್ಟೆ ರಾಮಚಂದ್ರ ಇನ್ನಿಲ್ಲ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಈಗಾಗಲೇ ಹಲವಾರು ಪ್ರತಿಭಾನ್ವಿತ ಕಲಾವಿದರು, ನಿರ್ದೇಶಕರನ್ನು ಕಳೆದುಕೊಂಡು ಬಡವಾಗಿರುವ ಕನ್ನಡ ಚಿತ್ರರಂಗಕ್ಕೆ ಇದೀಗ ಮತ್ತೊಂದು ಆಘಾತವಾಗಿದೆ. ಹಿರಿಯ ನಿರ್ದೇಶಕ ಕಟ್ಟೆ ರಾಮಚಂದ್ರ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು.

ಕಟ್ಟೆ ರಾಮಚಂದ್ರ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ ಆಪ್ತರಾಗಿದ್ದರು. ಕಟ್ಟೆ ರಾಮಚಂದ್ರ ಅವರ ಅರಿವು, ವೈಶಾಖದ ದಿನಗಳು ಸಿನಿಮಾ ಸಾಕಷ್ಟು ಜನಪ್ರಿಯತೆ ಪಡೆದಿದ್ದವು. ನಿರ್ದೇಶಕರಾಗಿ, ನಿರ್ಮಾಪಕರಾಗಿ ಹಾಗೂ ನಟರಾಗಿಯೂ ಗುರುತಿಸಿಕೊಂಡಿದ್ದರು.

ಅನಾರೋಗ್ಯದಿಂದ ಬಳಲುತ್ತಿದ್ದ ಕಟ್ಟೆ ರಾಮಚಂದ್ರ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಕೇಂದ್ರ ಸರ್ಕಾರದಿಂದ ಶೀಘ್ರ ಶಾಲಾ ಮಾರ್ಗಸೂಚಿ

Home add -Advt

Related Articles

Back to top button