ಪ್ರಗತಿವಾಹಿನಿ ಸುದ್ದಿ; ತುಮಕೂರು: ಬುದ್ಧಿಮಾಂದ್ಯ ಯುವತಿ ಮೇಲೆ ಎಎಸ್ ಐ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಸ್ ಐ ಉಮೇಶಯ್ಯ ಅಪರಾಧಿ ಎಂದು ತುಮಕೂರು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.
2017ರ ಜನವರಿ 15ರಂದು ನಡೆದಿದ್ದ ಈ ಪ್ರಕರಣ ರಾಷ್ಟ್ರಾಧ್ಯಂತ ಸಂಚಲನಕ್ಕೆ ಕಾರಣವಾಗಿತ್ತು. ಎ ಎಸ್ ಐ ನೀಚ ಕೃತ್ಯ ಸಾಬೀತಾಗಿದ್ದು, ಎ ಎಸ್ ಐ ಉಮೇಶಯ್ಯ ಅಪರಾಧಿ ಹಾಗೂ ವಾಹನ ಚಾಲಕ ನಿರ್ದೋಷಿ ಎಂದು ನ್ಯಾಯಾಧೀಶ ಹೆಚ್.ಎಸ್.ಮಲ್ಲಿಕಾರ್ಜುನಸ್ವಾಮಿ ತೀರ್ಪು ನೀಡಿದ್ದಾರೆ. ಜನವರಿ 31ರಂದು ಶಿಕ್ಷೆ ಪ್ರಮಾಣ ಪ್ರಕಟವಾಗಲಿದೆ.
ತುಮಕೂರು ಗ್ರಾಮಾಂತರ ಠಾಣೆ ಎಎಸ್ ಐ ಆಗಿದ್ದ ಉಮೇಶಯ್ಯ, ಬುದ್ಧಿಮಾಂದ್ಯ ಯುವತಿಯನ್ನು ಡ್ರಾಪ್ ಕೊಡುವ ನೆಪದಲ್ಲಿ ಬೊಲೆರೋ ವಾಹನದಲ್ಲಿ ಕರೆದೊಯ್ದು ಅಂತರಸನಹಳ್ಳಿ ಸೇತುವೆ ಬಳಿ ಅತ್ಯಾಚಾರವೆಸಗಿದ್ದ. ಸಂತ್ರಸ್ತೆ ಯುವತಿ ಸಂಬಂಧಿಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಸುದೀರ್ಘ ವಿಚಾರಣೆ, ವಾದ ವಿವಾದ ಆಲಿಸಿದ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಹೆಚ್.ಎಸ್.ಮಲ್ಲಿಕಾರ್ಜುನಸ್ವಾಮಿ ಎ ಎಸ್ ಐ ಅಪರಾಧಿ ಎಂದು ತೀರ್ಪು ನೀಡಿದ್ದು, ವಾಹನ ಚಾಲಕ ಈಶ್ವರನನ್ನು ಆರೋಪ ಮುಕ್ತಗೊಳಿಸಿ ಆದೇಶ ಹೊರಡಿಸಿದ್ದಾರೆ. ಜನವರಿ 31ರಂದು ಶಿಕ್ಷೆ ಪ್ರಮಾಣ ಪ್ರಕಟವಾಗಲಿದೆ.
ಭಯ್ಯು ಮಹಾರಾಜ್ ಆತ್ಮಹತ್ಯೆ: ಮೂವರು ಜೈಲುಪಾಲು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ