ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಶೃಂಗೇರಿ ತಹಶೀಲ್ದಾರ್ ಅಂಬುಜಾ ಕಾರುಚಾಲಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ತಹಶೀಲ್ದಾರ್ ಅಂಬುಜಾ ಶೃಂಗೇರಿ ತಾಲೂಕು ಕಚೇರಿಯಲ್ಲಿ ಭ್ರಷ್ಟಾಚಾರ ನಡೆಸಿದ್ದರು. ಬೋಗಸ್ ಹಕ್ಕುಪತ್ರಗಳನ್ನು ನೀಡಿ ವಂಚಿಸಿದ್ದರಲ್ಲದೇ ಭ್ರಷ್ಟಾಚಾರದಲ್ಲಿ ಕಚೇರಿ ಸಿಬ್ಬಂದಿಗಳು, ಪಿಡಿಓ ಗಳು , ಆರ್ ಐ ಸೇರಿದಂತೆ ಎಲ್ಲರೂ ಭಾಗಿಯಾಗಿದ್ದರು ಎಂಬ ಆರೋಪ ಕೇಳಿಬಂದಿತ್ತು. ಜನವರಿ 6ರಂದು ಎಸಿಬಿ ದಾಳಿ ವೇಳೆ ಸಿಕ್ಕಿಬಿದ್ದಿದ್ದ ಅಂಬುಜಾ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಇದೀಗ ಅಂಬುಜಾ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
ಈ ಬೆಳವಣಿಗೆ ನಡುವೆಯೇ ನಿನ್ನೆ ಸಂಜೆ ತಹಶೀಲ್ದಾರ್ ಅಂಬುಜಾ ಕಾರು ಚಾಲಕ ವಿಜೇತ್, ತಮ್ಮ ಅಡಿಕೆ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ತಹಶೀಲ್ದಾರ್ ಭ್ರಷ್ಟಾಚಾರ ಪ್ರಕರಣದ ಬೆನ್ನಲ್ಲೇ ಏಕಾಏಕಿ ಕಾರು ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿದ್ದು, ಪ್ರಕರಣ ಸಂಬಂಧ ಇದೀಗ ಶಿರಸ್ತೆದಾರ್ ಸೇರಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ