Kannada NewsKarnataka News

ರಾಣಿ ಚೆನ್ನಮ್ಮ ವಿವಿಯಲ್ಲಿ ವಿದ್ಯಾರ್ಥಿಗಳೂ ಸೇರಿದಂತೆ 42 ಜನರಿಗೆ ಕೋವಿಡ್ ಪಾಸಿಟಿವ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –    ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 32 ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಸೇರಿದಂತೆ 42 ಜನರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.

ವಿಶ್ವವಿದ್ಯಾಲಯದ ಪ್ರಾಧ್ಯಾಪಕರೊಬ್ಬರಿಗೆ ಕೋವಿಡ್ ದೃಢಪಟ್ಟಿದ್ದು ಅವರು ರಜೆಯ ಮೇಲೆ ತೆರಳಿದ್ದಾರೆ. ಈ ಹಿನ್ನೆಲೆಯಲ್ಲಿ ವಿವಿಯ ಹಾಸ್ಟೇಲ್ ವಿದ್ಯಾರ್ಥಿಗಳು ಮತ್ತು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯ ಗಂಟಲು ದ್ರವದ ಮಾದರಿ ಪಡೆದು ಕೋವಿಡ್ ಪರೀಕ್ಷೆ ಮಾಡಲಾಗಿತ್ತು. ಈ ಪೈಕಿ ಒಟ್ಟು 42 ಜನರಿಗೆ ಕೋವಿಡ್ ದೃಢಪಟ್ಟಿರುವುದಾಗಿ ತಿಳಿದುಬಂದಿದೆ.

ಬೆಳಗಾವಿಯಲ್ಲಿ ಸೋಮವಾರ ಕೊರೋನಾಕ್ಕೆ 6 ಜನರು ಬಲಿ; ಸಾವಿರ ಸನಿಹಕ್ಕೆ ಸೋಂಕಿತರು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button