Latest

ಸಚಿವ ಸ್ಥಾನಕ್ಕಾಗಿ ರಮೇಶ್ ಜಾರಕಿಹೊಳಿ ಹೊಸ ಪ್ಲಾನ್: ಆಕಾಂಕ್ಷಿಗಳ ಪಟ್ಟಿಯಲ್ಲಿ ಯಾರಿದ್ದಾರೆ?

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ ಮತ್ತೆ ಭಾರಿ ಚರ್ಚೆಗೆ ಬಂದಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಶೀಘ್ರದಲ್ಲಿಯೇ ದೆಹಲಿಗೆ ಭೇಟಿ ನೀಡಿ, ಹೈಕಮಾಂಡ್ ಒಪ್ಪಿಗೆ ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.

ಪಂಚರಾಜ್ಯಗಳ ಚುನಾವಣಾ ಪ್ರಚಾರದಲ್ಲಿ ನಿರತವಾಗಿರುವ ಬಿಜೆಪಿ ವರಿಷ್ಠರು, ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಇನ್ನೂ ಗ್ರೀನ್ ಸಿಗ್ನಲ್ ಕೊಟ್ಟಿಲ್ಲ. ಈ ನಡುವೆ ಸಚಿವಾಕಾಂಕ್ಷಿಗಳು ಮಂತ್ರಿ ಸ್ಥಾನಕ್ಕಾಗಿ ಇನ್ನಿಲ್ಲದ ಕಸರತ್ತು ಆರಂಭಿಸಿದ್ದಾರೆ.

ಗೋವಾಗೆ ತೆರಳಿರುವ ಶಾಸಕ ರಮೇಶ್ ಜಾರಕಿಹೊಳಿ, ಖಾಸಗಿ ಹೋಟೆಲ್ ನಲ್ಲಿ ಇಂದು ದೇವೇಂದ್ರ ಫಡ್ನವಿಸ್ ಭೇಟಿಯಾಗಲಿದ್ದು, ಅವರ ಮೂಲಕ ನೇರವಾಗಿ ಮಂತ್ರಿ ಸ್ಥಾನಕ್ಕಾಗಿ ಹೈಕಮಾಂಡ್ ಮೇಲೆ ಒತ್ತಡ ಹೇರಲು ಮುಂದಾಗಿದ್ದಾರೆ ಎನ್ನಲಾಗಿದೆ. ಇನ್ನೊಂದೆಡೆ ಎಂ.ಪಿ.ರೇಣುಕಾಚಾರ್ಯ ಹಾಗೂ ಶಾಸಕ ಯತ್ನಾಳ್ ಕೂಡ ಸಚಿವ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದಾರೆ. ಚುನಾವಣೆಗೆ ಒಂದು ವರ್ಷ ಬಾಕಿ ಇರುವ ಸಂದರ್ಭದಲ್ಲಿ ಸಚಿವ ಸಂಪುಟ ವಿಸ್ತರಣೆ ಇದೀಗ ಸಿಎಂ ಗೆ ತಲೆನೋವಾಗಿ ಪರಿಣಮಿಸಿದೆ.

ಸಚಿವ ಸ್ಥಾನದ ಆಕಾಂಕ್ಷಿಗಳು:

ಗೋಕಾಕ ಶಾಸಕ ರಮೇಶ ಜಾರಕಿಹೊಳಿ

ಸವದತ್ತಿ ಶಾಸಕ ಆನಂದ ಮಾಮನಿ

ಬೆಳಗಾವಿ ಶಾಸಕ ಅಭಯ ಪಾಟೀಲ

ಕೃಷ್ಣರಾಜ ಶಾಸಕ ರಾಮದಾಸ್
ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ
ಹಾಸನ ಶಾಸಕ ಪ್ರೀತಂ ಗೌಡ
ಕುಡುಚಿ ಶಾಸಕ ಪಿ.ರಾಜೀವ್
ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ
ಸುರಪುರ ಶಾಸಕ ರಾಜೂ ಗೌಡ
ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್
ಕಾರವಾರ ಶಾಸಕಿ ರೂಪಾಲಿ ನಾಯಕ್
ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ
ಚಿತ್ರದುರ್ಗ ಶಾಸಕ ತಿಪ್ಪಾರೆಡ್ಡಿ
ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ಧಾರವಾಡ ಶಾಸಕ ಅರವಿಂದ ಬೆಲ್ಲದ್,
ಹೊನ್ನಾಳಿ ಶಾಸಕ ರೇಣುಕಾಚಾರ್ಯ ಈ ಬಾರಿ ಸಚಿವ ಸ್ಥಾನಕ್ಕಾಗಿ ಕಸರತ್ತು ನಡೆಸಿದ್ದಾರೆ.

ರಮೇಶ ಜಾರಕಿಹೊಳಿ ಎಲ್ಲಿದ್ದಾರೆ? ದೆಹಲಿಗೆ ತೆರಳಿದ್ದು ನಿಜವೇ? – ಪ್ರಗತಿವಾಹಿನಿಗೆ ಹೇಳಿದ್ದೇನು?

ಬಂಗಾರದ ಬೆಲೆಯಲ್ಲಿ ಯಥಾ ಸ್ಥಿತಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button