ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಮೇಶ್ ಜಾರಕಿಹೊಳಿ ವಿರುದ್ಧದ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಕ್ತಾಯಗೊಂಡಿದ್ದು, ಅಂತಿಮ ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ಎಸ್ ಐಟಿಗೆ ಅನುಮತಿ ನೀಡಿದೆ.
ಅಂತಿಮ ತನಿಖಾ ವರದಿ ಸಲ್ಲಿಸಲು ಅವಕಾಶ ನಿಡುವಂತೆ ಎಸ್ ಐಟಿ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಮ್ಯಾಜಿಸ್ಟ್ರೇಟ್ ಮುಂದೆ ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದ್ದು ಅರ್ಜಿದಾರರು ಎತ್ತಿರುವ ಪ್ರಶ್ನೆಗಳನ್ನು ಮುಕ್ತವಾಗಿರಿಸಿದೆ.
ರಮೇಶ್ ಜಾರಕಿಹೊಳಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಹಾಗೂ ಸಿಡಿ ಬಹಿರಂಗ ಕೇಸ್ ಹಿನ್ನೆಲೆಯಲ್ಲಿ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆ ಮುಕ್ತಾಯಗೊಂಡಿದ್ದು, ಅಂತಿಮ ವರದಿ ಸಲ್ಲಿಸಲಾಗಿದ್ದು, ಸಧ್ಯದಲ್ಲಿಯೇ ರಮೇಶ್ ಜಾರಕಿಹೊಳಿ ಭವಿಷ್ಯ ನಿರ್ಧಾರವಾಗಲಿದೆ.
ಗೋವಾದಲ್ಲಿ ಕರ್ನಾಟಕದ ಕಾರ್ಮಿಕರ ಸಭೆ ನಡೆಸುತ್ತಿರುವ ಫಡ್ನವೀಸ್, ಸಿ.ಟಿ.ರವಿ, ರಮೇಶ ಜಾರಕಿಹೊಳಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ