Latest

ಮತ್ತೆ ತಾರಕಕ್ಕೇರಿದ ಹಿಜಾಬ್, ಕೇಸರಿ ಶಾಲು ವಿವಾದ

ಪ್ರಗತಿವಾಹಿನಿ ಸುದ್ದಿ; ಉಡುಪಿ: ಉಡುಪಿ ಹಾಗೂ ಕುಂದಾಪುರದ ಸರ್ಕಾರಿ, ಖಾಸಗಿ ಕಾಲೇಜುಗಳಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಮತ್ತೆ ತಾರಕಕ್ಕೇರಿದ್ದು, ಇಂದು ಕೂಡ ವಿದ್ಯಾರ್ಥಿಗಳು ಹಿಜಾಬ್ ಹಾಗೂ ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ.

ಕುಂದಾಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 20ಕ್ಕೂ ಹೆಚ್ಚು ಮುಸ್ಲೀಂ ವಿದ್ಯಾರ್ಥಿನಿಯರು ಇಂದು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸುತ್ತಿದ್ದಂತೆ ಕಾಲೇಜು ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ವಿದ್ಯಾರ್ಥಿನಯನ್ನು ತಡೆದಿದ್ದಾರೆ. ಈ ವೇಳೆ ವಿದ್ಯಾರ್ಥಿಗಳ ಪೋಷಕರು ಕೂಡ ಸ್ಥಳಕ್ಕಾಗಮಿಸಿದ್ದು, ಕಾಲೇಜಿನ ಕ್ರಮದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಷ್ಟು ವರ್ಷ ಇಲ್ಲದ ನಿಯಮ ಈಗೇಕೆ? ಈ ಹಿಂದೆಯೂ ನಾವು ಹಿಜಾಬ್ ಧರಿಸಿ ತರಗತಿಗೆ ಬರುತ್ತಿದ್ದೆವು. ಅದೇ ರೀತಿ ಈಗಲೂ ನಮಗೆ ಹಿಜಾಬ್ ಧರಿಸಿ ತರಗತಿಗೆ ಬರಲು ಅವಕಾಶ ಕೊಡಬೇಕು. ಹಿಜಾಬ್ ನಮ್ಮ ಧಾರ್ಮಿಕ ಹಕ್ಕು, ಸಂವಿಧಾನದಲ್ಲಿ ಎಲ್ಲರಿಗೂ ಸಮಾನ ಅವಕಾಶವಿದೆ. ಈಗ ಏಕಾಏಕಿ ಹಿಜಾಬ್ ಧರಿಸಿ ಕಾಲೇಜಿಗೆ ಬರುವಂತೆ ಇಲ್ಲ ಎಂದು ಹೇಳುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.

ವಿದ್ಯಾರ್ಥಿನಿಯರ ಮನವೊಲಿಸಲು ಸಾಧ್ಯವಾಗದ ಕಾಲೇಜು ಸಿಬ್ಬಂದಿಗಳು ಕಾಲೇಜು ಗೇಟ್ ಹಾಕಿದ್ದಾರೆ. ಇದರಿಂದ ಬೇಸರವ್ಯಕ್ತಪಡಿಸಿರುವ ವಿದ್ಯಾರ್ಥಿನಿಯರು ಹಾಗೂ ಪೋಷಕರು ಕಾಲೇಜು ಮೈದಾನದಲ್ಲಿ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ. ಪ್ರತಿಭಟನೆ ನಡೆಸಿದರೆ ಎಫ್ ಐ ಆರ್ ದಾಖಲಿಸುವುದಾಗಿ ಕುಂದಾಪುರ ಸರ್ಕಲ್ ಇನ್ಸ್ ಪೆಕ್ಟರ್ ಎಚ್ಚರಿಸಿದ್ದಾರೆ. ಕಾಲೇಜು ಮೈದಾನದಲ್ಲಿಯೇ ಕುಳಿತುರುವ ವಿದ್ಯಾರ್ಥಿಗಳು ಧರಣಿ ನಡೆಸಿದ್ದಾರೆ.

Home add -Advt

ಮತ್ತೊಂದೆಡೆ ಉಡುಪಿಯ ಕಾಲೇಜಿನಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ್ದು, ವಿದ್ಯಾರ್ಥಿಗಳನ್ನು ವಾಪಸ್ ಕಳುಹಿಸಲಾಗಿದೆ.
ನಾಪತ್ತೆಯಾಗಿದ್ದ ASI ಶವವಾಗಿ ಪತ್ತೆ

Related Articles

Back to top button