ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಸಿಡಿ ಹಗರಣದಲ್ಲಿ ಸಿಲುಕಿಕೊಂಡಿದ್ದ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಎಸ್ಐಟಿ ಕ್ಲೀನ್ ಚಿಟ್ ನೀಡಿದೆ.
SIT ಶುಕ್ರವಾರ ಹೈಕೋರ್ಟ್ ಗೆ ಬಿ ರಿಪೋರ್ಟ್ ಸಲ್ಲಿಸಿದೆ. SIT ತನಿಖಾ ವರದಿ ಸಲ್ಲಿಸಲು ಗುರುವಾರವಷ್ಟೆ ಹೈಕೊರ್ಟ್ ಅನುಮತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಶುಕ್ರವಾರ ಬಿ ರಿಪೋರ್ಟ್ ಹೊಂದಿದ ತನಿಖಾ ವರದಿ ಸಲ್ಲಿಸಲಾಗಿದೆ.
ಸಾಕ್ಷ್ಯಾಧಾರ ಕೊರತೆಯಿಂದಾಗಿ ಬಿ ರಿಪೋರ್ಟ್ ಸಲ್ಲಿಸಲಾಗಿದೆ ಎಂದು ಗೊತ್ತಾಗಿದೆ.
ರಮೇಶ್ ಜಾರಕಿಹೊಳಿ ವಿರುದ್ಧ ಸಿಡಿ ಕೇಸ್; ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ಅನುಮತಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ