ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 7500 ಎನ್ ಸಿಸಿ ಕೆಡೆಟ್ಸ್ ತೆಗೆದುಕೊಳ್ಳಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಓಬವ್ವ ಆತ್ಮರಕ್ಷಣಾ ಕಲಾ ಕೌಶಲ್ಯ ತರಬೇತಿಗೆ ಚಾಲನೆ ನೀಡಿ ಮಾತನಾಡಿದ ಸಿಎಂ, ಸ್ವಾತಂತ್ರ್ಯ ಹೋರಾಟ ಮಾಡಿದ ಕಿತ್ತೂರು ರಾಣಿ ಚೆನ್ನಮ್ಮ, ಕೆಳದಿ ಚೆನ್ನಮ್ಮ, ಬೆಳವಡಿ ಮಲ್ಲಮ್ಮ, ಒನಕೆ ಓಬವ್ವ ಇವರೆಲ್ಲ ಪುರುಷರನ್ನೂ ಮೀರಿಸುವ ಪೌರುಷ ಹೊಂದಿದ್ದರು. ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರಿಗೆ ಆತ್ಮರಕ್ಷಣೆ ಕಲೆಯ ಬಗ್ಗೆ ತರಬೇತಿ ನೀಡುವ ಕಾರ್ಯಕ್ರಮ ಇದಾಗಿದೆ ಎಂದರು.
7500 ಹೊಸ ಕೆಡೆಟ್ಸ್ ತೆಗೆದುಕೊಳ್ಳಲು ಸರ್ಕಾರ ನಿರ್ಧಾರ ಮಾಡಿದೆ. 44 ಸಾವಿರ ಶಾಲೆಗಳಲ್ಲಿ ಎನ್ ಸಿಸಿ ಇದೆ. ಎನ್ ಸಿಸಿ ಕೆಡೆಟ್ ಗಳ ಕಾರ್ಯಕ್ರಮ ಶೈಲಿ ಬದಲಾಯಿಸಿ ಹೊಸ ಪರಿವರ್ತನೆಗೆ ರಕ್ಷಣಾ ಸಚಿವರ ಅನುಮತಿ ಕೇಳಲಾಗಿದೆ. 50 ಸಾವಿರಕ್ಕೂ ಹೆಚ್ಚು ಕೆಡೆಟ್ ಗಳಿಗೆ ರಾಜ್ಯದಿಂದ ಮಿಲಿಟರಿ ಸಮಾನವಾದ ಶಿಕ್ಷಣ ನೀಡುವುದಕ್ಕೆ ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ