Latest

ಪಂಚಭೂತಗಳಲ್ಲಿ ಲೀನರಾದ ಗಾನ ಕೋಗಿಲೆ

ಪ್ರಗತಿವಾಹಿನಿ ಸುದ್ದಿ; ಮುಂಬೈ: ಇಂದು ಬೆಳಿಗ್ಗೆ ವಿಧಿವಶರಾಗಿದ್ದ ಭಾರತ ರತ್ನ, ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರ ಅಂತ್ಯಕ್ರಿಯೆ ಮುಂಬೈನ ಶಿವಾಜಿ ಪಾರ್ಕ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ಇತ್ತೀಚೆಗಷ್ಟೇ ಕೋವಿಡ್ ನಿಂದ ಚೇತರಿಸಿಕೊಂಡಿದ್ದ ಗಾನ ಕೋಗಿಲೆ ಲತಾ ಮಂಗೇಶ್ಕರ್ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದ 92 ವರ್ಷದ ಲತಾ ಮಂಗೇಶ್ಕರ್, ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದರು.

ಲತಾ ಅವರ ಪಾರ್ಥಿವ ಶರೀರವನ್ನು ಮುಂಬೈನ ಅವರ ನಿವಾಸದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಸಂಜೆ ಅವರ ನಿವಾಸದಿಂದ ಶಿವಾಜಿ ಪಾರ್ಕ್ ವರೆಗೂ ಪಾರ್ಥಿವಶರೀರದ ಮೆರವಣಿಗೆ ಮೂಲಕ ತರಲಾಗಿದ್ದು, ಶಿವಾಜಿ ಪಾರ್ಕ್ ನಲ್ಲಿ ಅಂತ್ಯಕ್ರಿಯೆ ನೆರವೇರಿತು.

8 ಜನ ಪಂಡಿತರಿಂದ ಅಂತಿಮ ವಿಧಿವಿಧಾನಗಳು ನೆರವೇರಿದವು. ಪ್ರಧಾನಿ ಮೋದಿ, ಸಿಎಂ ಉದ್ಧವ್ ಠಾಕ್ರೆ ಸೇರಿದಂತೆ ಹಲವು ಗಣ್ಯರು ಲತಾ ಮಂಗೇಶ್ಕರ್ ಅವರ ಪಾರ್ಥಿವಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಲತಾ ಅವರ ಸಹೋದರನ ಮಗನಿಂದ ಲತಾ ಅವರ ಪಾರ್ಥಿವ ಶರೀರಕ್ಕೆ ಅಗ್ನಿಸ್ಪರ್ಶ ಮಾಡಲಾಯಿತು. ಭಾರತದ ಗಾನ ಕೋಗಿಲೆ ಪಂಚಬೂತಗಳಲ್ಲಿ ಲೀನರಾಗಿದ್ದಾರೆ.

ಲತಾ ಮಂಗೇಶ್ಕರ್ ಅವರ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ, ಪಿಯೂಷ್ ಗೋಯಲ್, ಶರದ್ ಪವಾರ್ ಸೇರಿದಂತೆ ಹಲವು ರಾಜಕೀಯ ಗಣ್ಯರು, ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, ನಟ ಶಾರುಖ್ ಖಾನ್ ಸೇರಿದಂತೆ ಬಾಲಿವುಡ್ ಚಿತ್ರರಂಗದ ನಟ, ನಟಿಯರು ಭಾಗವಹಿಸಿದ್ದರು.

ಕನ್ನಡಿಗರ ಹೃದಯ ಗೆದ್ದಿದ್ದ ಲತಾ ಮಂಗೇಶ್ಕರ್; ಗಾನ ಕೋಗಿಲೆ ಹಾಡಿದ್ದ ಕನ್ನಡದ ಗೀತೆಗಳು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button