
ಪ್ರಗತಿವಾಹಿನಿ ಸುದ್ದಿ; ಬಾಗಲಕೋಟೆ: ರಾಜ್ಯಾದ್ಯಂತ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ತಾರಕಕ್ಕೇರಿದ್ದು, ವಿದ್ಯಾರ್ಥಿಗಳ ನಡುವೆ ಧರ್ಮ ಸಂಘರ್ಷಕ್ಕೆ ಕಾರಣವಾಗುತ್ತಿದ್ದು, ಸರ್ಕಾರಿ ಪಿಯು ಕಾಲೇಜುಗಳಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿವೆ.
ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಧರಣಿ ನಡೆಸಿದ್ದರೆ, ಮುಸ್ಲೀಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಕೆಲ ವಿದ್ಯಾರ್ಥಿಗಳು ಕಾಲೇಜು ಕಟ್ಟಡದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಗಾಯಗೊಂಡಿದ್ದಾನೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗುತ್ತಿದ್ದಂತೆ ಪೊಲೀಸರು ದೌಡಾಯಿಸಿದ್ದು, ಕಲ್ಲು ತೂರಾಟ ನಡೆಸಿದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ.
ಪ್ರತಿಭಟನೆ ನಿಲ್ಲಿಸುವಂತೆ ವಿದ್ಯಾರ್ಥಿಗಳಿಗೆ ಕಾಲೇಜು ಸಿಬ್ಬಂದಿಗಳು ಹಾಗೂ ಪೊಲೀಸರು ಮನವಿ ಮಾಡಿದ್ದಾರೆ. ಈ ವೇಳೆ ವಿದ್ಯಾರ್ಥಿಗಳು ಹಾಗೂ ಕಾಲೇಜು ಸಿಬ್ಬಂದಿ, ಪೊಲೀಸರ ನಡುವೆ ವಾಗ್ವಾದ ಆರಂಭವಾಗಿದೆ. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಕಾಲೇಜು ಧ್ವಜ ಸ್ತಂಭದಲ್ಲಿ ಕೇಸರಿ ಬಾವುಟ ಹಾರಿಸಿ ವಿದ್ಯಾರ್ಥಿಗಳ ಪ್ರತಿಭಟನೆ; ಮತ್ತೊಂದೆಡೆ ಕಲ್ಲು ತೂರಾಟ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ